ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು ನೋಡಿ

|

Updated on: Sep 18, 2024 | 11:30 AM

ಗೃಹ ಸಚಿವ ಡಾ. ಜಿ ಪರಮೇಶ್ವರ್ ಬುಧವಾರ ಅನೇಕ ವಿಚಾರಗಳ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಮುಂದೆ ಮಾಹಿತಿ ನೀಡಿದ್ದು, ಡ್ರಗ್ಸ್ ದಂಧೆ ಮಟ್ಟ ಹಾಕುವ ಬಗ್ಗೆ ಮಾತನಾಡಿದ್ದಾರೆ. ಇದೇ ವೇಳೆ ಅವರು, ಮೆಡಿಕಲ್ ಶಾಪ್​ಗಳಲ್ಲಿ ಸಹ ಸಿಂಥೆಟಿಕ್ ಡ್ರಗ್ಸ್ ಸಿಗುತ್ತಿದೆ ಎಂಬ ಮಾಹಿತಿ ಇದೆ ಎಂಬ ಆಘಾತಕಾರಿ ಹೇಳಿಕೆ ನೀಡಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್ 18: ಕರ್ನಾಟಕದಲ್ಲಿ ಡ್ರಗ್ಸ್ ದಂಧೆ ಹತ್ತಿಕ್ಕಲು ಕ್ರಮ ಕೈಗೊಳ್ಳುತ್ತೇವೆ. ಡ್ರಗ್ಸ್ ದಂಧೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕಡಿಮೆಯಾಗಿದೆ. ಆದಾಗ್ಯೂ, ಮೆಡಿಕಲ್ ಸ್ಟೋರ್​​ಗಳಲ್ಲಿ ಕೂಡ ಸಿಂಥೆಟಿಕ್ ಡ್ರಗ್ಸ್ ಸಿಗುತ್ತಿದೆ ಎಂಬ ಮಾಹಿತಿ ಇದ್ದು, ಇದು ನಮಗೆ ಆತಂಕ ಮೂಡಿಸಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಹೇಳಿದರು. ಬೆಂಗಳೂರಿನ ಸದಾಶಿವನಗರದಲ್ಲಿ ಮಾತನಾಡಿದ ಅವರು, ಮೆಡಿಕಲ್ ಸ್ಟೋರ್​​ಗಳಲ್ಲಿ ಡ್ರಗ್ಸ್ ದಂಧೆಗೆ ಯಾವ ರೀತಿ ಕಡಿವಾಣ ಹಾಕಬೇಕು ಎಂಬ ಬಗ್ಗೆ ಇಂದು ಸಭೆ ನಡೆಸುತ್ತೇವೆ ಎಂದರು.

ಮೆಡಿಕಲ್ ಸ್ಟೋರ್​​ಗಳಲ್ಲಿ ಡ್ರಗ್ಸ್ ಮಾರಾಟಕ್ಕೆ ಕಾನೂನೇ ಬೇರೆ ಆಗುತ್ತದೆ. ಔಷಧ ಎಂದು ಹೇಳುತ್ತಾರೆ. ಅದಕ್ಕೆ ಆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ‌ ಮಾಡುತ್ತೇವೆ. ಗಾಂಜಾ ಹಾಗೂ ಇತರೆ ಡ್ರಗ್ಸ್ ನಿಯಂತ್ರಣ ಮಾಡಿದ್ದೇವೆ. ಪ್ರಕರಣಗಳು ಕಡಿಮೆ ಆಗಿವೆ ಎಂದು ಪರಮೇಶ್ವರ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us on