ನಮ್ಮತ್ರ ದುಡ್ಡಿಲ್ಲ, ಸಿದ್ದರಾಮಣ್ಣನತ್ರ ದುಡ್ಡಿಲ್ಲ: ಗೃಹ ಸಚಿವ ಪರಮೇಶ್ವರ್ ಶಾಕಿಂಗ್ ಹೇಳಿಕೆ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕರು ಒಬ್ಬೊಬ್ಬರಾಗಿ ಸರ್ಕಾರದ ವಿರುದ್ಧ ಸಿಡಿದೇಳುತ್ತಿರುವಂತೆಯೇ ಇದೀಗ ಗೃಹ ಸಚಿವ ಡಾ. ಜಿ ಪರಮೇಶ್ವರ ಕೂಡ ಸರ್ಕಾರದ ಅಸಮರ್ಥತೆಯ ಬಗ್ಗೆ ಬಹಿರಂಗ ಹೇಳಿಕೆ ನೀಡಿದ್ದಾರೆ. ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಲು ಸರ್ಕಾರದ ಬಳಿ ದುಡ್ಡಿಲ್ಲ ಎಂದು ಅವರು ಬಾಗಲಕೋಟೆಯಲ್ಲಿ ಬಹಿರಂಗವಾಗಿ ಹೇಳಿರುವ ವಿಡಿಯೋ ಇಲ್ಲಿದೆ ನೋಡಿ.
ಬಾಗಲಕೋಟೆ, ಜೂನ್ 24: ಒಂದೆಡೆ ವಸತಿ ಯೋಜನೆಯಲ್ಲಿ ಅಕ್ರಮದ ಬಗ್ಗೆ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಆರೋಪ ಮಾಡಿದ್ದರೆ, ಮತ್ತೊಂದೆಡೆ ಅನುದಾನ ವಿಚಾರವಾಗಿ ಶಾಸಕ ರಾಜು ಕಾಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಅದರ ಬೆನ್ನೆಲ್ಲೇ ಈಗ ಗೃಹ ಸಚಿವ ಡಾ. ಜಿ ಪರಮೇಶ್ವರ ಕೂಡ ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರದ ಬಳಿ ಹಣ ಇಲ್ಲ ಎಂದು ಬಹಿರಂಗವಾಗಿ ಹೇಳಿದ್ದಾರೆ.
ಬಾಗಲಕೋಟೆಯಲ್ಲಿ ಸೋಮವಾರ ಮಾತನಾಡಿದ ಸಚಿವರು, ಬಾದಾಮಿ ಅಭಿವೃದ್ಧಿಗೆ ಒಂದು ಯೋಜನೆ ಸಿದ್ದ ಮಾಡಿ. ಅದು ಎಷ್ಟು ಮೊತ್ತದ್ದಾದರೂ ಪರವಾಗಿಲ್ಲ. ಅದು ಸಾವಿರ ಕೋಟಿ ಪ್ರಾಜೆಕ್ಟ್ ಆಗಿರಲಿ. ಪ್ರಸ್ತಾವನೆ ಸಿದ್ಧ ಮಾಡಿ ಕೇಂದ್ರಕ್ಕೆ ಕಳುಹಿಸಿಕೊಡಿ. ಯಾಕೆಂದರೆ, ನಮ್ಮ ಬಳಿ ದುಡ್ಡಿಲ್ಲ. ಸಿದ್ದರಾಮಣ್ಣನ ಬಳಿ ದುಡ್ಡಿಲ್ಲ ಎಂದು ಹೇಳಿದ್ದಾರೆ. ನಮ್ಮ ಬಳಿ ಇರುವ ದುಡ್ಡಿನಲ್ಲಿ ನಿಮಗೆ ಈಗಾಗಲೇ ಅಕ್ಕಿ, ಬೇಳೆ, ಎಣ್ಣೆ ಕೊಟ್ಟಿದ್ದೇವೆ ಎಂದಿದ್ದಾರೆ. ಗೃಹ ಸಚಿವರ ಹೇಳಿಕೆ ವಿಡಿಯೋ ಇಲ್ಲಿದೆ.