ಮುಂದಿನ ತಿಂಗಳು ಪಿಎಸ್ಐ, ಕಾನ್ಸ್‌ಟೇಬಲ್ ಹುದ್ದೆ ನೇಮಕಾತಿ ಅಧಿಸೂಚನೆ ಹೊರಡಿಸ್ತೇವೆ: ಪ್ರಿಯಾಂಕ್ ಖರ್ಗೆ
ಗೃಹ ಸಚಿವ ಪ್ರಿಯಾಂಕ್ ಖರ್ಗೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹಲವು ಮಹತ್ವದ ಸುಧಾರಣೆಗಳನ್ನು ಮತ್ತು ನೇಮಕಾತಿ ಪ್ರಕ್ರಿಯೆಗಳನ್ನು ಘೋಷಿಸಿದ್ದಾರೆ. ಪೊಲೀಸ್ ಇಲಾಖೆಯ ಸಿಬ್ಬಂದಿಗಳ ವರ್ಗಾವಣೆ, ಹುದ್ದೆಗಳ ತರ್ಕಬದ್ಧಗೊಳಿಸುವಿಕೆ ಮತ್ತು ಸಮರ್ಪಕ ಕಾರ್ಯನಿರ್ವಹಣೆಗಾಗಿ ಮೇಜರ್ ಸರ್ಜರಿ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ. ಸದ್ಯ ಕೆಲವು ಸಿಬ್ಬಂದಿಗಳು ಒಂದೇ ಸ್ಥಳದಲ್ಲಿ ದೀರ್ಘಕಾಲದಿಂದ ಕಾರ್ಯನಿರ್ವಹಿಸುತ್ತಿದ್ದು, ಇದರ ಬದಲಾವಣೆಗೆ ಮುಖ್ಯಮಂತ್ರಿಗಳೂ ಆಸಕ್ತಿ ವಹಿಸಿದ್ದಾರೆ ಎಂದು ಖರ್ಗೆ ತಿಳಿಸಿದ್ದಾರೆ.
ಬೆಂಗಳೂರು, ಜುಲೈ 06: ಗೃಹ ಸಚಿವ ಪ್ರಿಯಾಂಕ್ ಖರ್ಗೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹಲವು ಮಹತ್ವದ ಸುಧಾರಣೆಗಳನ್ನು ಮತ್ತು ನೇಮಕಾತಿ ಪ್ರಕ್ರಿಯೆಗಳನ್ನು ಘೋಷಿಸಿದ್ದಾರೆ. ಪೊಲೀಸ್ ಇಲಾಖೆಯ ಸಿಬ್ಬಂದಿಗಳ ವರ್ಗಾವಣೆ, ಹುದ್ದೆಗಳ ತರ್ಕಬದ್ಧಗೊಳಿಸುವಿಕೆ ಮತ್ತು ಸಮರ್ಪಕ ಕಾರ್ಯನಿರ್ವಹಣೆಗಾಗಿ ಮೇಜರ್ ಸರ್ಜರಿ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.
ಸದ್ಯ ಕೆಲವು ಸಿಬ್ಬಂದಿಗಳು ಒಂದೇ ಸ್ಥಳದಲ್ಲಿ ದೀರ್ಘಕಾಲದಿಂದ ಕಾರ್ಯನಿರ್ವಹಿಸುತ್ತಿದ್ದು, ಇದರ ಬದಲಾವಣೆಗೆ ಮುಖ್ಯಮಂತ್ರಿಗಳೂ ಆಸಕ್ತಿ ವಹಿಸಿದ್ದಾರೆ ಎಂದು ಖರ್ಗೆ ತಿಳಿಸಿದ್ದಾರೆ. ಪೊಲೀಸ್ ಇಲಾಖೆಯ ನೇಮಕಾತಿ ಕುರಿತು ಮಾತನಾಡಿದ ಅವರು, ಈಗಾಗಲೇ 7,000 ಸಿಬ್ಬಂದಿ ನೇಮಕಾತಿಗೆ ದಿನಾಂಕ ಪ್ರಕಟಗೊಂಡಿದೆ. ಇದರ ಜೊತೆಗೆ, ಮುಂದಿನ ತಿಂಗಳ ಅಂತ್ಯದ ವೇಳೆಗೆ ಪಿಎಸ್ಐ ಮತ್ತು ಕಾನ್ಸ್‌ಟೇಬಲ್ ಹುದ್ದೆಗಳಿಗೆ ಮತ್ತೊಂದು 5,000-6,000 ಸಿಬ್ಬಂದಿ ನೇಮಕಾತಿ ಅಧಿಸೂಚನೆ ಹೊರಡಿಸುವುದಾಗಿ ಪ್ರಿಯಾಂಕ್ ಖರ್ಗೆ ಘೋಷಿಸಿದರು. ಅಪರಾಧ ಪ್ರಮಾಣದ ಆಧಾರದ ಮೇಲೆ ಪೊಲೀಸ್ ಠಾಣೆಗಳ ಸಂಖ್ಯೆಯನ್ನು ನಿರ್ಧರಿಸಲಾಗುತ್ತದೆಯೇ ಹೊರತು ಜನಸಂಖ್ಯೆ ಆಧಾರದ ಮೇಲೆ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

