ಜಿಎಸ್​ಟಿ ದರ ಕ್ರಮಬದ್ಧಗೊಳಿಸುವಿಕೆ: ದೆಹಲಿಯಲ್ಲಿ ಬಿಜೆಪಿಯೇತರ ರಾಜ್ಯಸರ್ಕಾರಗಳ ವಿಚಾರ ವಿಮರ್ಶೆ, ಕರ್ನಾಟಕದ ನೇತೃತ್ವ

Updated on: Aug 29, 2025 | 1:47 PM

ಇದು ಹಣಕಾಸು ಸಚಿವರ ಸಭೆಯಾಗಿರುವುದರಿಂದ ರಾಜ್ಯದ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವ ವಹಿಸಬೇಕಿತ್ತು. ಅದರೆ ಅವರು ಈ ಜವಾಬ್ದಾರಿಯನನ್ನು ಕೃಷ್ಣ ಭೈರೇಗೌಡರ ಹೆಗಲಿಗೆ ಹಾಕಿರುವುದು ಯುವಮಂತ್ರಿಯ ಕ್ಷಮತೆ ಮತ್ತು ಸಾಮರ್ಥ್ಯಗಳ ಮೇಲೆ ಅವರಿಗಿರುವ ವಿಶ್ವಾಸವನ್ನು ತೋರಿಸುತ್ತದೆ. ಕಂದಾಯ ಸಚಿವರಾಗಿ ಕೃಷ್ಣ ಭೈರೇಗೌಡ ಹಲವಾರು ಸುಧಾರಣೆಗಳನ್ನು ತಂದಿರುವುದು ಕನ್ನಡಿಗರಿಗೆ ಗೊತ್ತಿದೆ.

ದೆಹಲಿ, ಅಗಸ್ಟ್ 29: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು 79ನೇ ಸ್ವಾತಂತ್ರ್ಯೋವ್ಸದ ಅಂಗವಾಗಿ ಕೆಂಪುಕೋಟೆಯಿಂದ ಮಾತಾಡುವಾದ ಜಿಎಸ್​ಟಿಯಲ್ಲಿ ಹೊಸ ತಲೆಮಾರು ಸುಧಾರಣೆಗಳನ್ನು ಜಾರಿಗೆ ತಂದು ಅಗತ್ಯ ವಸ್ತುಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಿ ಭಾರತೀಯರಿಗೆ ದೀಪಾವಳಿಯ ಉಡುಗೊರೆ ನೀಡೋದಾಗಿ ಹೇಳಿದ್ದರು. ಇದೇ ಹಿನ್ನೆಲೆಯಲ್ಲಿ ದೆಹಲಿಯ ಕರ್ನಾಟಕ ಭವನದಲ್ಲಿಂದು ಕರ್ನಾಟಕ ಸರ್ಕಾರದ ಆತಿಥ್ಯದಲ್ಲಿ ಬಿಜೆಪಿಯೇತರ ಆಡಳಿತವಿರುವ 8 ರಾಜ್ಯಗಳ ಹಣಕಾಸ ಸಚಿವರು (finance ministers) ಜಿಎಸ್​ಟಿ ದರವನ್ನು ಕ್ರಮಬದ್ಧಗೊಳಿಸುವುದಕ್ಕೆ ಸಂಬಂಧಿಸಿದಂತೆ ವಿಚಾರ ವಿಮರ್ಶೆ ನಡೆಸಲು ಸಭೆ ಸೇರಿದ್ದಾರೆ. ರಾಜ್ಯದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರ ನೇತೃತ್ವದಲ್ಲಿ ಸಭೆಯನ್ನು ಆಯೋಜಿಸಲಾಗಿದೆ. ಕೃಷ್ಣ ಭೈರೇಗೌಡ ಲವಲವಿಕೆಯಿಂದ ಓಡಾಡುತ್ತಾ ಬೇರೆ ರಾಜ್ಯಗಳ ಗಣ್ಯರನ್ನು ಸ್ವಾಗತಿಸುತ್ತಿರುವುದನ್ನು ನೋಡಬಹುದು.

ಇದನ್ನೂ ಓದಿ:   ಭೂ ಸುಧಾರಣಾ ಯೋಜನೆ ಬಗ್ಗೆ ವಿವರವಾದ ಮಾಹಿತಿ ಒದಗಿಸಿದ ಕಂದಾಯ ಸಚಿವ ಕೃಷ್ಣ ಭೈರೇಗೌಡ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More