HD Kumaraswamy: ಎಚ್​​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ

Updated on: May 20, 2024 | 2:21 PM

ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​ಡಿ ಕುಮಾರಸ್ವಾಮಿ ಅವರು ಬೆಂಗಳೂರಿನಲ್ಲಿ ದಿಢೀರ್ ಸುದ್ದಿಗೋಷ್ಠಿ ನಡೆಸಿದ್ದು, ಕಾಂಗ್ರೆಸ್ ಸರ್ಕಾರದ ಒಂದು ವರ್ಷದಲ್ಲಿನ ದುರಾಳಿತ ಹಾಗೂ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಪೆನ್​ಡ್ರೈವ್​ ಪ್ರಕರಣ ಸೇರಿದಂತೆ ಇನ್ನಿತರ ವಿಚಾರದ ಬಗ್ಗೆ ಮಾತನಾಡುತ್ತಿದ್ದು, ಅದನ್ನು ನೇರಪ್ರಸಾರದಲ್ಲಿ ನೋಡಿ.

ಬೆಂಗಳೂರು, (ಮೇ.20): ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ (Congress Government) ಒಂದು ವರ್ಷ ಪೂರೈಸಿದೆ. ಈ ಹಿನ್ನೆಲೆ ಇಂದು(ಮೇ 20) ಸಿದ್ದರಾಮಯ್ಯನವರು ಮಾಧ್ಯಮ ಸಂವಾದ ನಡೆಸಿ ತಮ್ಮ ಸರ್ಕಾರದ ಒಂದು ವರ್ಷದ ಸಾಧನೆಗಳನ್ನು ಜನತೆ ಮುಂದೆ ಬಿಚ್ಚಿಟ್ಟಿದ್ದಾರೆ, ಮತ್ತೊಂದೆಡೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್​ಡಿ ಕುಮಾರಸ್ವಾಮಿ ಅವರು ಸುದ್ದಿಗೋಷ್ಠಿ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ಸಿದ್ದರಾಮಯ್ಯ ಸರ್ಕಾರ ಒಂದು ವರ್ಷದ ಏನು ಸಾಧನೆ ಮಾಡಿದೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಪ್ರಜ್ವಲ್ ರೇವಣ್ಣ ಪ್ರಕರಣ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಮಾತನಾಡುತ್ತಿದ್ದು, ಅದನ್ನು ನೇರಪ್ರಸಾರದಲ್ಲಿ ನೋಡಿ.

Published on: May 20, 2024 02:19 PM
Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More