ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್ಆರ್ಟಿಸಿ ಬಂದ್ ಎಂದ ಕ್ರಿಯಾ ಸಮಿತಿ ಅಧ್ಯಕ್ಷ
ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳ ನೌಕರರು ತಮ್ಮ ಮೂಲ ವೇತನದಲ್ಲಿ ಶೇಕಡಾ 25ರಷ್ಟು ಹೆಚ್ಚಳಕ್ಕಾಗಿ ಒತ್ತಾಯಿಸುತ್ತಿದ್ದಾರೆ. ಸರ್ಕಾರದಿಂದ ಯಾವುದೇ ಸ್ಪಂದನೆ ಸಿಗದ ಕಾರಣ, ಡಿಸೆಂಬರ್ 31ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧರಿಸಲಾಗಿದೆ. ಸರ್ಕಾರ ಸಾರಿಗೆ ಇಲಾಖೆಗೆ ಬಾಕಿ ಇರುವ 5010 ಕೋಟಿ ರೂ ಮತ್ತು ಶಕ್ತಿ ಯೋಜನೆಯ 2000 ಕೋಟಿ ರೂ ಬಿಡುಗಡೆ ಮಾಡಬೇಕೆಂದು ಆಗ್ರಹಿಸಲಾಗಿದೆ.
ದಾವಣಗೆರೆ, ಡಿಸೆಂಬರ್ 27: ರಾಜ್ಯದ 4 ಸಾರಿಗೆ ನಿಗಮಗಳ ಸಿಬ್ಬಂದಿ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಡಿಸೆಂಬರ್ 31ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕಕ್ಕೆ (Strike) ನಿರ್ಧಾರ ಮಾಡಲಾಗಿದೆ. ಇತ್ತ ನಗರದಲ್ಲಿ ಕಾರ್ಮಿಕ ಸಂಘಟನೆ ಜಂಟಿ ಕ್ರಿಯಾ ಸಮಿತಿ ಎಚ್ಚರಿಕೆ ನೀಡಿದೆ. ಸಭೆ ನಡೆಸಿ ಸಿಎಂ, ಸಾರಿಗೆ ಸಚಿವರಿಗೆ ಮನವಿ ಸಲ್ಲಿಸಿದರೂ ಭರವಸೆಯಿಲ್ಲ. ತಮ್ಮ ಬೇಡಿಕೆ ಈಡೇರಿಕೆಗಾಗಿ ಡಿ.31ರ ಬೆಳಗ್ಗೆ 6 ಗಂಟೆಯಿಂದ ಮುಷ್ಕರಕ್ಕೆ ನಿರ್ಧಾರ ಮಾಡಲಾಗಿದೆ. ಸಾರಿಗೆ ಸಿಬ್ಬಂದಿ ಮೂಲ ವೇತನ ಶೇಕಡಾ 25ರಷ್ಟು ಹೆಚ್ಚಳ ಮಾಡಬೇಕು. ರಾಜ್ಯ ಸರ್ಕಾರ ಸಾರಿಗೆ ಇಲಾಖೆಗೆ 5,010 ಕೋಟಿ ರೂ. ಬಾಕಿ ನೀಡಬೇಕಿದೆ. ಶಕ್ತಿ ಯೋಜನೆ ಬಾಕಿ 2,000 ಕೋಟಿ ರೂ. ಬಿಡುಗಡೆ ಮಾಡುವಂತೆ ಸಾರಿಗೆ 4 ನಿಗಮಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಉಮೇಶ್ ಆಗ್ರಹಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
