ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್​ಆರ್​ಟಿಸಿ ಬಂದ್​ ಎಂದ ಕ್ರಿಯಾ ಸಮಿತಿ ಅಧ್ಯಕ್ಷ

Edited By:

Updated on: Dec 27, 2024 | 8:35 PM

ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳ ನೌಕರರು ತಮ್ಮ ಮೂಲ ವೇತನದಲ್ಲಿ ಶೇಕಡಾ 25ರಷ್ಟು ಹೆಚ್ಚಳಕ್ಕಾಗಿ ಒತ್ತಾಯಿಸುತ್ತಿದ್ದಾರೆ. ಸರ್ಕಾರದಿಂದ ಯಾವುದೇ ಸ್ಪಂದನೆ ಸಿಗದ ಕಾರಣ, ಡಿಸೆಂಬರ್ 31ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧರಿಸಲಾಗಿದೆ. ಸರ್ಕಾರ ಸಾರಿಗೆ ಇಲಾಖೆಗೆ ಬಾಕಿ ಇರುವ 5010 ಕೋಟಿ ರೂ ಮತ್ತು ಶಕ್ತಿ ಯೋಜನೆಯ 2000 ಕೋಟಿ ರೂ ಬಿಡುಗಡೆ ಮಾಡಬೇಕೆಂದು ಆಗ್ರಹಿಸಲಾಗಿದೆ.

ದಾವಣಗೆರೆ, ಡಿಸೆಂಬರ್​ 27: ರಾಜ್ಯದ 4 ಸಾರಿಗೆ ನಿಗಮಗಳ ಸಿಬ್ಬಂದಿ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಡಿಸೆಂಬರ್ 31ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕಕ್ಕೆ (Strike) ನಿರ್ಧಾರ ಮಾಡಲಾಗಿದೆ. ಇತ್ತ ನಗರದಲ್ಲಿ ಕಾರ್ಮಿಕ ಸಂಘಟನೆ ಜಂಟಿ ಕ್ರಿಯಾ ಸಮಿತಿ ಎಚ್ಚರಿಕೆ ನೀಡಿದೆ. ಸಭೆ ನಡೆಸಿ ಸಿಎಂ, ಸಾರಿಗೆ ಸಚಿವರಿಗೆ ಮನವಿ ಸಲ್ಲಿಸಿದರೂ ಭರವಸೆಯಿಲ್ಲ. ತಮ್ಮ ಬೇಡಿಕೆ ಈಡೇರಿಕೆಗಾಗಿ ಡಿ.31ರ ಬೆಳಗ್ಗೆ 6 ಗಂಟೆಯಿಂದ ಮುಷ್ಕರಕ್ಕೆ ನಿರ್ಧಾರ ಮಾಡಲಾಗಿದೆ. ಸಾರಿಗೆ ಸಿಬ್ಬಂದಿ ಮೂಲ ವೇತನ ಶೇಕಡಾ 25ರಷ್ಟು ಹೆಚ್ಚಳ ಮಾಡಬೇಕು. ರಾಜ್ಯ ಸರ್ಕಾರ ಸಾರಿಗೆ ಇಲಾಖೆಗೆ 5,010 ಕೋಟಿ ರೂ. ಬಾಕಿ ನೀಡಬೇಕಿದೆ. ಶಕ್ತಿ ಯೋಜನೆ ಬಾಕಿ 2,000 ಕೋಟಿ ರೂ. ಬಿಡುಗಡೆ ಮಾಡುವಂತೆ ಸಾರಿಗೆ 4 ನಿಗಮಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಉಮೇಶ್ ಆಗ್ರಹಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More