ವೇತನ ಹಿಂಬಾಕಿಗೆ ಡಿಮ್ಯಾಂಡ್: ಜ.29ರಂದು ಸಾರಿಗೆ ನೌಕರರ ಪ್ರತಿಭಟನೆ
ಸಾರಿಗೆ ನೌಕರರು ಸರ್ಕಾರದ ವಿರುದ್ಧ ಮತ್ತೊಮ್ಮೆ ಸಿಡಿದೆದ್ದಿದ್ದು, 38 ತಿಂಗಳ ವೇತನ ಹಿಂಬಾಕಿಯನ್ನು ಕೂಡಲೇ ಪಾವತಿಸುವಂತೆ ಒತ್ತಾಯಿಸಿ ಬೆಂಗಳೂರು ಚಲೋಗೆ ಕರೆ ನೀಡಿದ್ದಾರೆ. ಜನವರಿ 1, 2024 ರಿಂದ ನಾಲ್ಕು ವರ್ಷಗಳ ವೇತನ ನೀಡಬೇಕೆಂದು ನೌಕರರು ಬೇಡಿಕೆ ಇಟ್ಟಿದ್ದು, ಜನವರಿ 29ರಂದು ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ಬೆಂಗಳೂರು, ಜನವರಿ 18: ಸರ್ಕಾರದ ವಿರುದ್ಧ ಸಾರಿಗೆ ನೌಕರರು ಮತ್ತೆ ಸಿಡಿದೆದ್ದಿದ್ದು, ಅನಂತ್ ಸುಬ್ಬರಾವ್ ನೇತೃತ್ವದಲ್ಲಿ ಬೆಂಗಳೂರು ಚಲೋಗೆ ಕರೆನೀಡಿದ್ದಾರೆ. ಜನವರಿ 29ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4ರವರೆಗೆ ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆ ನಡೆಯಲಿದ್ದು, ಈ ಕುರಿತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಜಂಟಿಕ್ರಿಯಾ ಸಮಿತಿ ಪತ್ರ ಬರೆದಿದೆ. 38 ತಿಂಗಳ ವೇತನ ಹಿಂಬಾಕಿ ನೀಡುವಂತೆ ಹಾಗೂ 01.01.2024ರಿಂದ 4 ವರ್ಷಗಳ ವೇತನಕ್ಕೆ ಬೇಡಿಕೆ ಇಡಲಾಗಿದ್ದು, ಪ್ರತಿಭಟನೆಯಲ್ಲಿ 4 ಸಾರಿಗೆ ನಿಗಮಗಳ ಸಿಬ್ಬಂದಿ ಭಾಗಿಯಾಗಲಿದ್ದಾರೆ ಎಂದು ತಿಳಿಸಲಾಗಿದೆ.ನೌಕರರ ಈ ಪ್ರತಿಭಟನೆ ಎಚ್ಚರಿಕೆಗೆ ಸಾರಿಗೆ ಇಲಾಖೆ ಯಾವ ರೀತಿಯಾಗಿ ಸ್ಪಂದಿಸುತ್ತದೆ ಎಂಬುದು ಸದ್ಯದ ಕುತೂಹಲವಾಗಿದೆ. ಪ್ರತಿಭಟನೆಯ ಮುನ್ನವೇ ನೌಕರರ ಬೇಡಿಕೆಗಳನ್ನು ಈಡೇರಿಸುತ್ತದೆಯೇ ಅಥವಾ ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಎಚ್ಚರಿಕೆ ನೀಡುತ್ತದೆಯೇ ಎಂದು ಕಾದು ನೋಡಬೇಕಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
