ಮೋಡ ಬಿತ್ತನೆ ಕಾರ್ಯಕ್ಕೆ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ ಸಚಿವ ಚಲುವರಾಯಸ್ವಾಮಿ ಚಾಲನೆ
ಕರ್ನಾಟಕದಲ್ಲಿ ಬರಗಾಲ ಪರಿಸ್ಥಿತಿ ನಿವಾರಣೆಗೆ 28 ಕೋಟಿ ವೆಚ್ಚದ ಮೋಡ ಬಿತ್ತನೆ ಯೋಜನೆಗೆ ಚಾಲನೆ ನೀಡಲಾಗಿದೆ. ಬೆಂಗಳೂರಿನ HAL ವಿಮಾನ ನಿಲ್ದಾಣದಲ್ಲಿ ಸಚಿವ ಚಲುವರಾಯಸ್ವಾಮಿ ಈ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ಜಲಸಂಪನ್ಮೂಲ ಇಲಾಖೆಯ ವತಿಯಿಂದ 60 ದಿನಗಳ ಕಾಲ ನಡೆಯಲಿರುವ ಈ ಯೋಜನೆ, ರೈತರಿಗೆ ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ನೆರವಾಗುವ ನಿರೀಕ್ಷೆಯಿದೆ.
ಬೆಂಗಳೂರು, ಸೆಪ್ಟೆಂಬರ್ 04: ಜಲಸಂಪನ್ಮೂಲ ಇಲಾಖೆ ವತಿಯಿಂದ ಮೋಡ ಬಿತ್ತನೆ ಕಾರ್ಯಕ್ಕೆ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ ಸಚಿವ ಚಲುವರಾಯಸ್ವಾಮಿ ಚಾಲನೆ ನೀಡಿದ್ದಾರೆ. ಮೋಡ ಬಿತ್ತನೆಗೆ 28 ಕೋಟಿ ಅನುದಾನವನ್ನು ಸರ್ಕಾರ ನೀಡಿದ್ದು, ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಮೋಡ ಬಿತ್ತನೆ ನಡೆಸಲಾಗುತ್ತಿದೆ. 60 ದಿನಗಳ ಕಾಲ ಮೋಡ ಬಿತ್ತನೆ ಕಾರ್ಯಕ್ರಮ ನಡೆಯಲಿದೆ. ರಾಜ್ಯದಲ್ಲಿ ಮಳೆ ಕಡಿಮೆ ಇದೆ, ನಿರೀಕ್ಷೆಗೆ ತಕ್ಕಂತೆ ಮಳೆ ಆಗಿಲ್ಲ. ಕುಡಿಯುವ ನೀರಿಗಾಗಿ ಜೂನ್ವರೆಗೆ ಶೇಖರಣೆ ಮಾಡುವ ಅವಶ್ಯಕತೆ ಇದೆ. ಹೀಗಾಗಿ ಉಷ್ಣಾಂಶ ನೋಡ್ಕೊಂಡು ಮೋಡ ಬಿತ್ತನೆ ಮಾಡುತ್ತೇವೆ ಎಂದು ಜಲಸಂಪನ್ಮೂಲ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
