ಮೋಡ ಬಿತ್ತನೆ ಕಾರ್ಯಕ್ಕೆ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ ಸಚಿವ ಚಲುವರಾಯಸ್ವಾಮಿ ಚಾಲನೆ

Edited By:

Updated on: Sep 04, 2026 | 5:05 PM

ಕರ್ನಾಟಕದಲ್ಲಿ ಬರಗಾಲ ಪರಿಸ್ಥಿತಿ ನಿವಾರಣೆಗೆ 28 ಕೋಟಿ ವೆಚ್ಚದ ಮೋಡ ಬಿತ್ತನೆ ಯೋಜನೆಗೆ ಚಾಲನೆ ನೀಡಲಾಗಿದೆ. ಬೆಂಗಳೂರಿನ HAL ವಿಮಾನ ನಿಲ್ದಾಣದಲ್ಲಿ ಸಚಿವ ಚಲುವರಾಯಸ್ವಾಮಿ ಈ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ಜಲಸಂಪನ್ಮೂಲ ಇಲಾಖೆಯ ವತಿಯಿಂದ 60 ದಿನಗಳ ಕಾಲ ನಡೆಯಲಿರುವ ಈ ಯೋಜನೆ, ರೈತರಿಗೆ ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ನೆರವಾಗುವ ನಿರೀಕ್ಷೆಯಿದೆ.

ಬೆಂಗಳೂರು, ಸೆಪ್ಟೆಂಬರ್​​ 04: ಜಲಸಂಪನ್ಮೂಲ ಇಲಾಖೆ ವತಿಯಿಂದ ಮೋಡ ಬಿತ್ತನೆ ಕಾರ್ಯಕ್ಕೆ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ ಸಚಿವ ಚಲುವರಾಯಸ್ವಾಮಿ ಚಾಲನೆ ನೀಡಿದ್ದಾರೆ. ಮೋಡ ಬಿತ್ತನೆಗೆ 28 ಕೋಟಿ ಅನುದಾನವನ್ನು ಸರ್ಕಾರ ನೀಡಿದ್ದು, ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಮೋಡ ಬಿತ್ತನೆ ನಡೆಸಲಾಗುತ್ತಿದೆ. 60 ದಿನಗಳ ಕಾಲ ಮೋಡ ಬಿತ್ತನೆ ಕಾರ್ಯಕ್ರಮ ನಡೆಯಲಿದೆ. ರಾಜ್ಯದಲ್ಲಿ ಮಳೆ ಕಡಿಮೆ ಇದೆ, ನಿರೀಕ್ಷೆಗೆ ತಕ್ಕಂತೆ ಮಳೆ ಆಗಿಲ್ಲ. ಕುಡಿಯುವ ನೀರಿಗಾಗಿ ಜೂನ್​ವರೆಗೆ ಶೇಖರಣೆ ಮಾಡುವ ಅವಶ್ಯಕತೆ ಇದೆ. ಹೀಗಾಗಿ ಉಷ್ಣಾಂಶ ನೋಡ್ಕೊಂಡು ಮೋಡ ಬಿತ್ತನೆ ಮಾಡುತ್ತೇವೆ ಎಂದು ಜಲಸಂಪನ್ಮೂಲ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More