ರಾಜ್ಯದಲ್ಲಿ ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ
ಅಕ್ರಮ ಬಾಂಗ್ಲಾ ವಲಸಿಗರು ಮತ್ತು ಇತರ ವಿದೇಶಿಯರನ್ನು ಪತ್ತೆಹಚ್ಚಲು ರಾಜ್ಯ ಸರ್ಕಾರ ವಿಶೇಷ ಕಾರ್ಯಾಚರಣೆಗೆ ಮುಂದಾಗಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಈಗಾಗಲೇ ಇಲಾಖೆಗೆ ನಿರ್ದೇಶನ ನೀಡಿದ್ದು, ಹೈಕೋರ್ಟ್ ಸೂಚನೆಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಅನಧಿಕೃತವಾಗಿ ವಾಸಿಸುವವರನ್ನು ಗುರುತಿಸಿ ಗಡೀಪಾರು ಮಾಡುವುದು ಕಾರ್ಯಾಚರಣೆಯ ಮುಖ್ಯ ಉದ್ದೇಶವಾಗಿದೆ.
ಬೆಂಗಳೂರು, ಫೆಬ್ರವರಿ 05: ಅಕ್ರಮ ವಲಸಿಗರನ್ನು ಪತ್ತೆಹಚ್ಚಲು ರಾಜ್ಯ ಸರ್ಕಾರವು ವಿಶೇಷ ಕಾರ್ಯಾಚರಣೆಯನ್ನು ಆರಂಭಿಸಿದೆ. ಬಾಂಗ್ಲಾದೇಶ ಮತ್ತು ಇತರ ದೇಶಗಳಿಂದ ಅನಧಿಕೃತವಾಗಿ ನೆಲೆಸಿರುವ ವಿದೇಶಿಯರನ್ನು ಗುರುತಿಸುವುದು ಈ ಕಾರ್ಯಾಚರಣೆಯ ಮುಖ್ಯ ಉದ್ದೇಶವಾಗಿದೆ. ಹೈಕೋರ್ಟ್‌ನ ಸೂಚನೆಯ ನಂತರ ರಾಜ್ಯ ಸರ್ಕಾರ ಈ ಕ್ರಮಕ್ಕೆ ಮುಂದಾಗಿದ್ದು, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಈಗಾಗಲೇ ಸಂಬಂಧಪಟ್ಟ ಇಲಾಖೆಗೆ ನಿರ್ದೇಶನ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ರಾಜ್ಯಾದ್ಯಂತ ಅನಧಿಕೃತವಾಗಿ ವಾಸಿಸುತ್ತಿರುವ ಬಾಂಗ್ಲಾದೇಶಿಗರು ಮತ್ತು ವಿದೇಶಿಯರನ್ನು ಹುಡುಕಲು ನಿರ್ದೇಶನ ನೀಡಿರುವುದಾಗಿ ತಿಳಿಸಿದ್ದಾರೆ. ಈ ಹಿಂದೆ, ಸುಮಾರು 370 ಜನರನ್ನು ಗಡೀಪಾರು ಮಾಡಲಾಗಿದೆ ಎಂದು ಸದನದಲ್ಲಿ ಉತ್ತರ ನೀಡಿದ್ದನ್ನೂ ಈ ವೇಳೆ ಅವರು ಉಲ್ಲೇಖಿಸಿದ್ದಾರೆ. ಎಫ್‌ಆರ್‌ಒ (ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ) ದಾಖಲೆಗಳಲ್ಲಿ ಇಷ್ಟು ದೊಡ್ಡ ಸಂಖ್ಯೆಯ ಅನಧಿಕೃತ ವಲಸಿಗರು ಕಾಣಸಿಗದಿರುವುದರಿಂದ, ಸರ್ಕಾರವು ಈ ವಿಶೇಷ ಡ್ರೈವ್ ಮೂಲಕ ಅವರನ್ನು ಪತ್ತೆಹಚ್ಚಲು ಮುಂದಾಗಿದೆ ಎಂದು ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ

