Karnataka Legislative Assembly Session Live: ವಿಧಾನ ಮಂಡಲ ಅಧಿವೇಶನ ನೇರ ಪ್ರಸಾರ

|

Updated on: Jul 25, 2024 | 10:21 AM

Karnataka Assembly Session Live: ವಿಧಾನ ಮಂಡಲ ಅಧಿವೇಶನ ಆರಂಭವಾಗಿದೆ. ಅಧಿವೇಶನದಲ್ಲಿ ಇಂದು ಮುಡಾ ಹಗರಣದ ಚರ್ಚೆ, ಗದ್ದಲ ಮಾಡಲಿದೆ. ನಿನ್ನೆ ರಾತ್ರಿ ವಿಧಾನಸಭೆ ಮೆಟ್ಟಿಲುಗಳ ಮೇಲೆ ಬಿಜೆಪಿ, ಜೆಡಿಎಸ್ ಶಾಸಕರು ಭಜನೆ ಮಾಡಿ ಪ್ರತಿಭಟನೆ ನಡೆಸಿದ್ದರು. ಈಗ ಕಲಾಪ ಮತ್ತಷ್ಟು ಗದ್ದಲದಿಂದ ಕೂಡಿರಲಿದೆ.

ಬೆಂಗಳೂರು, ಜುಲೈ.25: ವಿಧಾನಸಭೆ ಹಾಗೂ ವಿಧಾನಪರಿಷತ್​ನಲ್ಲಿ ಕಳೆದ ಒಂದು ವಾರದಿಂದ ಹಗರಣಗಳದ್ದೇ ಸದ್ದು. ಮುಡಾ ಸೈಟು ಹಂಚಿಕೆ, ವಾಲ್ಮೀಕಿ ನಿಗಮದಲ್ಲಾಗಿರುವ ಬಹುಕೋಟಿ ಹಗರಣದ ವಿರುದ್ಧ ಹೋರಾಟ ತೀವ್ರಗೊಂಡಿದೆ. ಇಷ್ಟು ದಿನ ಸದನದ ಬಾವಿಗಿಳಿದು ಹೋರಾಟ ಮಾಡ್ತಿದ್ದ ಬಿಜೆಪಿ, ಜೆಡಿಎಸ್ ಸದಸ್ಯರು ನಿನ್ನೆಯಿಂದ ಅಹೋರಾತ್ರಿ ಧರಣಿ ಕೈಗೊಂಡಿದ್ದಾರೆ. ಅತ್ತ ದಲಿತರ ಹಣವೂ ಲೂಟಿ, ಇತ್ತ ಮುಡಾವೂ ಲೂಟಿ, ಹಗರಣಗಳ ಸರದಾರ, ಕಾಂಗ್ರೆಸ್ ಸರ್ಕಾರ ಅಂತಾ ಭಿತ್ತಿಪತ್ರ ಹಿಡಿದುಕೊಂಡು ಧರಣಿ ಆರಂಭಿಸಿದ ಬಿಜೆಪಿ, ಜೆಡಿಎಸ್ ನಾಯಕರು ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದ್ದಾರೆ. ಧರಣಿ ಮುಂದುವರಿಸಿದ ಬಿಜೆಪಿ, ಜೆಡಿಎಸ್ ಸದಸ್ಯರು ತಡರಾತ್ರಿ ಭಜನೆ, ಹಾಡಿನ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಭಿನ್ನ ಪ್ರತಿಭಟನೆ ನಡೆಸಿದ್ದಾರೆ. ಮುಂದುವರಿದ ಭಾಗವಾಗಿ ಇಂದು ಕೂಡ ಸದನದಲ್ಲಿ ಭಾರೀ ಗದ್ದಲಗಳಾಗುವ ಸಾಧ್ಯತೆ ಇದೆ. ಇಂದು ಮುಡಾ ಸೈಟು ಹಂಚಿಕೆ ಹಗರಣವನ್ನು ಎಳೆದು ಕಾಂಗ್ರೆಸ್ ವಿರುದ್ಧ ಎರಗಲು ವಿಪಕ್ಷಗಳು ಮುಂದಾಗಿವೆ. ಕಲಾಪದ ನೇರ ಪ್ರಸಾರ ಇಲ್ಲಿ ವೀಕ್ಷಿಸಿ.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Published on: Jul 25, 2024 10:21 AM