Karnataka Assembly Session Live Streaming: ಕರ್ನಾಟಕ ವಿಧಾನಸಭೆ ಅಧಿವೇಶನ ನೇರಪ್ರಸಾರ

| Updated By: Digi Tech Desk

Updated on: May 22, 2023 | 11:51 AM

ಕರ್ನಾಟಕ ವಿಧಾನಸಭೆ ಅಧಿವೇಶನ ನೇರಪ್ರಸಾರ - ಅಧಿವೇಶನದಲ್ಲಿ ಮೊದಲ ಎರಡು ದಿನ ಶಾಸಕರು ಪ್ರಮಾಣ ವಚನ ಸ್ವೀರಿಸಲಿದ್ದು, ಹಂಗಾಮಿ ಸಭಾಪತಿ ಆರ್​​​.ವಿ ದೇಶಪಾಂಡೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಕೊನೆ ದಿನ ಸಭಾಪತಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಈ ಕುರಿತಾದ ಕ್ಷಣ ಕ್ಷಣ ಮಾಹಿತಿ ಇಲ್ಲಿದೆ....

Karnataka Legislative Assembly Session Live Streaming: ಕರ್ನಾಟಕದಲ್ಲಿ ಕಾಂಗ್ರೆಸ್​ ಭರ್ಜರಿ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಏರಿದೆ. ನೂತನ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ಸರ್ಕಾರ ರಚನೆಯಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಮೊದಲ ಹಂತದಲ್ಲಿ 8 ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದೀಗ ನೂತನ ಸರ್ಕಾರದ ಮೊದಲ ಅಧಿವೇಶನ ಇಂದಿನಿಂದ ಮೂರು ದಿನ (ಮೇ.22-24) ನಡೆಯಲಿದೆ. ಈ ಅಧಿವೇಶನದಲ್ಲಿ ಮೊದಲ ಎರಡು ದಿನ ಶಾಸಕರು ಪ್ರಮಾಣ ವಚನ ಸ್ವೀರಿಸಲಿದ್ದು, ಹಂಗಾಮಿ ಸಭಾಪತಿ ಆರ್​​​.ವಿ ದೇಶಪಾಂಡೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಕೊನೆ ದಿನ ಸಭಾಪತಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಈ ಕುರಿತಾದ ಕ್ಷಣ ಕ್ಷಣ ಮಾಹಿತಿ ಇಲ್ಲಿದೆ….

Published On - 11:49 am, Mon, 22 May 23

Follow us on