Karnataka Legislative Assembly, Live: ವಿಧಾನ ಸಭೆ ಅಧಿವೇಶನ, ಮಂಗಳವಾರದ ಕಾರ್ಯಕಲಾಪಗಳ ನೇರ ಪ್ರಸಾರ

ಅರುಣ್​ ಕುಮಾರ್​ ಬೆಳ್ಳಿ

Updated on: Jul 18, 2023 | 11:24 AM

ವಿಧಾನ ಸಭೆಯಲ್ಲಿ ನಡೆಯುತ್ತಿರುವ ಇಂದಿನ ಕಾರ್ಯಕಲಾಪಗಳ ನೇರ ಪ್ರಸಾರ.

ಬೆಂಗಳೂರು: ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನವನ್ನು (Assembly Session) ಜುಲೈ 22ರವರೆಗೆ ವಿಸ್ತರಿಸಿರುವುದು ನಿಮಗೆ ಗೊತ್ತಿದೆ. ವಾರದ ಎರಡನೇ ದಿನ (ಮಂಗಳವಾರದ) ಕಾರ್ಯಕಲಾಪ ಅರಂಭವಾಗಿದೆ. ಸದನ ಆರಂಭವಾಗುತ್ತಿದ್ದಂತೆಯೇ ಸಭಾಧ್ಯಕ್ಷ ಯುಟಿ ಖಾದರ್ ಇಂದು ಸದನದಲ್ಲಿ ಪ್ರಶ್ನೆ ಕೇಳಲಿರುವ ಸದಸ್ಯರ ಹೆಸರುಗಳನ್ನು ಓದಿದರು. ಆದರೆ ವಿಧಾನ ಸಭೆಯ ಚೀಫ್ ವ್ಹಿಪ್ ಅಶೋಕ್ ಮಹಾದೇವಪ್ಪ ಪಟ್ಟಣ್ ಅವರ ಹೆಸರು ಪಟ್ಟಿಯಲ್ಲಿರಲಿಲ್ಲ. ಅವರು ಎದ್ದು ನಿಂತಿ ಸಭಾಧ್ಯಕ್ಷರಿಗೆ ತಮ್ಮ ಹೆಸರು ಓದಲಿಲ್ಲ ಅಂದಾಗ, ನೀವು ಬೇಗ ಬಂದು ಹೆಸರು ಬರೆಸಿರಲಿಕ್ಕಿಲ್ಲ ಎನ್ನುತ್ತಾರೆ. ಅದಕ್ಕೆ ಪಟ್ಟಣ್ ದಿನಾಲೂ ಬರೆಸಿದರೂ ಮಿಸ್ ಆಗುತ್ತಿದೆ ಅನ್ನುತ್ತಾರೆ. ವಿಧಾನ ಸಭೆಯಲ್ಲಿ ನಡೆಯುತ್ತಿರುವ ಇಂದಿನ ಕಾರ್ಯಕಲಾಪಗಳ ನೇರ ಪ್ರಸಾರ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.