Karnataka Legislative Assembly, Live: ವಿಧಾನ ಸಭೆ ಅಧಿವೇಶನ, ಬುಧವಾರದ ಕಾರ್ಯಕಲಾಪಗಳ ನೇರ ಪ್ರಸಾರ

ಅರುಣ್​ ಕುಮಾರ್​ ಬೆಳ್ಳಿ Edited By:

Updated on: Jul 19, 2023 | 11:39 AM

ವಿಧಾನ ಸಭೆಯಲ್ಲಿ ನಡೆಯತ್ತಿರುವ ಕಾರ್ಯಕಲಾಪಗಳ ನೇರ ಪ್ರಸಾರ.

ಬೆಂಗಳೂರು: ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನವನ್ನು (Assembly Session) ಜುಲೈ 22ರವರೆಗೆ ವಿಸ್ತರಿಸಕಗಿದೆ. ವಿಧಾನ ಸಭೆಯಲ್ಲಿ ಬುಧವಾರದ ಕಾರ್ಯಕಲಾಪಗಳು ಅರಂಭವಾಗಿದೆ. ನಿನ್ನೆ ಅಂದರೆ ಮಂಗಳವಾರ ಬೆಂಗಳೂರಲ್ಲಿ ರಾಷ್ಟ್ರೀಯ ವಿರೋಧ ಪಕ್ಷಗಳ ಸಭೆ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸೇರಿದಂತೆ ಅವರ ಸಂಪುಟದ ಹಲವಾರು ಸಚಿವರು ಸಭೆಯಲ್ಲಿ ಪಾಲ್ಗೊಂಡಿದ್ದರು. ಹಾಗಾಗಿ, ಸದನದಲ್ಲಿ ಕೇವಲ ಬೆರಳೆಣಿಕೆಯಷ್ಟು ಮಾತ್ರ ಸದಸ್ಯರಿದ್ದರು. ಬಿಜೆಪಿ ನಾಯಕ ಸುರೇಶ್ ಕುಮಾರ್ (Suresh Kumar) ಅಧಿವೇಶನವನ್ನು ತಾಜ್ ವೆಸ್ಟೆಂಡ್ ಹೋಟೆಲ್ ಗೆ ಶಿಫ್ಟ್ ಮಾಡಿ ಅಂತ ಗೇಲಿ ಕೂಡ ಮಾಡಿದರು. ಇಂದು ಅದೇ ವಿಷಯದ ಮೇಲೆ ಬಿಸಿ ಬಿಸಿ ಚರ್ಚೆಯಾಗುವ ಸಾಧ್ಯತೆ ಇದೆ. ವಿಧಾನ ಸಭೆಯಲ್ಲಿ ನಡೆಯತ್ತಿರುವ ಕಾರ್ಯಕಲಾಪಗಳ ನೇರ ಪ್ರಸಾರ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jul 19, 2023 11:23 AM
Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.