Karnataka Legislative Assembly, Live: ವಿಧಾನ ಸಭೆ ಅಧಿವೇಶನ, ಶುಕ್ರವಾರದ ಕಾರ್ಯಕಲಾಪಗಳ ನೇರ ಪ್ರಸಾರ

ಅರುಣ್​ ಕುಮಾರ್​ ಬೆಳ್ಳಿ

Updated on: Jul 14, 2023 | 11:39 AM

ವಿಧಾನ ಸಭೆಯಲ್ಲಿ ನಡೆಯುತ್ತಿರುವ ಇಂದಿನ ಕಾರ್ಯಕಲಾಪಗಳ ನೇರ ಪ್ರಸಾರ.

ಬೆಂಗಳೂರು: ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ (Budget Session) ಶುಕ್ರವಾರದ ಕಾರ್ಯಕಲಾಪ ಅರಂಭವಾಗಿದೆ. ನಾವು ಪದೇಪದೆ ವರದಿ ಮಾಡುತ್ತಿರುವಂತೆ ಸದನದಲ್ಲಿ ಆರೋಗ್ಯಕರ ಚರ್ಚೆಗಳಿಗಿಂತ ಟೀಕೆ, ಆರೋಪ-ಪ್ರತ್ಯಾರೋಪ, ಗಲಾಟೆ-ಗದ್ದಲಗಳೇ ಜಾಸ್ತಿಯಾಗುತ್ತವೆ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ರನ್ನು ಕುರಿತು, ಸದನದಲ್ಲಿ ನೀವು ಎಷ್ಟೇ ಕೂಗಾಡಿದರೂ ಬಿಜೆಪಿ ಹೈಕಮಾಂಡ್ ವಿರೋಧ ಪಕ್ಷದ ನಾಯಕ ಮಾಡೋದಿಲ್ಲ ಎಂದು ಹೇಳಿದ್ದರು. ಯತ್ನಾಳ್ ಪ್ರತಿ ವಿಷಯ ಚರ್ಚೆಗೆ ಬಂದಾಗ ಬಿಜೆಪಿ ಪರ ತಾವೇ ಹೆಚ್ಚು ಮಾತಾಡುತ್ತಿದ್ದಾರೆ. ವಿಧಾನ ಸಭೆಯಲ್ಲಿ ನಡೆಯುತ್ತಿರುವ ಇಂದಿನ ಕಾರ್ಯಕಲಾಪಗಳ ನೇರ ಪ್ರಸಾರ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.