ಬೆಂಗಳೂರು ಲೋಕಾಯುಕ್ತ ದಾಳಿ: ವಿಶೇಷ ಭೂಸ್ವಾಧೀನಾಧಿಕಾರಿ ಮಲ್ಲಿಕಾರ್ಜುನ್ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ

Updated on: Aug 20, 2026 | 9:07 AM

ಬೆಂಗಳೂರಿನಲ್ಲಿ ವಿಶೇಷ ಭೂಸ್ವಾಧೀನಾಧಿಕಾರಿ ಮಲ್ಲಿಕಾರ್ಜುನ್ ಮನೆ, ಕಚೇರಿ ಸೇರಿದಂತೆ 11 ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದೆ. ಈ ದಾಳಿಯಲ್ಲಿ ₹12.95 ಕೋಟಿಗೂ ಅಧಿಕ ಮೌಲ್ಯದ ಅಸಮತೋಲಿತ ಆಸ್ತಿ ಪತ್ತೆಯಾಗಿದೆ. ಎರಡು ವಾಸದ ಮನೆಗಳು, 100 ಎಕರೆ ಕೃಷಿ ಜಮೀನು, ₹2.53 ಕೋಟಿ ನಗದು, ₹3.10 ಕೋಟಿ ಚಿನ್ನಾಭರಣ ಸೇರಿದಂತೆ ಅಪಾರ ಪ್ರಮಾಣದ ಚರಾಸ್ತಿಗಳು ಬೆಳಕಿಗೆ ಬಂದಿವೆ.

ಬೆಂಗಳೂರು, ಆಗಸ್ಟ್ 20: ಬೆಂಗಳೂರಿನಲ್ಲಿ ವಿಶೇಷ ಭೂಸ್ವಾಧೀನಾಧಿಕಾರಿ ಮಲ್ಲಿಕಾರ್ಜುನ್ ಮನೆ, ಕಚೇರಿ ಮತ್ತು ಸಂಬಂಧಿಕರ ಮನೆಗಳು ಸೇರಿದಂತೆ ಒಟ್ಟು 11 ಸ್ಥಳಗಳಲ್ಲಿ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಈ ಮಹತ್ವದ ಕಾರ್ಯಾಚರಣೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿದ್ದು, ಮಲ್ಲಿಕಾರ್ಜುನ್ ಅವರ ಬಳಿ ಅಪಾರ ಪ್ರಮಾಣದ ಅಕ್ರಮ ಆಸ್ತಿ ಪತ್ತೆಯಾಗಿದೆ. ದಾಳಿ ವೇಳೆ ಒಟ್ಟು 18 ಕೋಟಿ 32 ಲಕ್ಷ ರೂಪಾಯಿ ಮೌಲ್ಯದ ಆಸ್ತಿ ದಾಖಲೆಗಳು ಲಭ್ಯವಾಗಿದ್ದು, ಇದರಲ್ಲಿ 12 ಕೋಟಿ 95 ಲಕ್ಷ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಸೇರಿದೆ. ಪತ್ತೆಯಾದ ಆಸ್ತಿಗಳ ಪಟ್ಟಿಯಲ್ಲಿ ಎರಡು ವಾಸದ ಮನೆಗಳು, 100 ಎಕರೆ ಐದು ಗುಂಟೆ ಕೃಷಿ ಜಮೀನು ಸೇರಿವೆ. ಚರಾಸ್ತಿಗಳ ಮೌಲ್ಯವು 14 ಕೋಟಿ 28 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.

ಅಧಿಕಾರಿಗಳು 2 ಕೋಟಿ 53 ಲಕ್ಷ ರೂಪಾಯಿ ನಗದು, 3 ಕೋಟಿ 10 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, 15 ಲಕ್ಷ ರೂಪಾಯಿ ಬೆಲೆಬಾಳುವ ವಾಹನಗಳು, 1 ಕೋಟಿ ರೂಪಾಯಿ ಬ್ಯಾಂಕ್ ಬ್ಯಾಲೆನ್ಸ್ ಮತ್ತು 33 ಲಕ್ಷ 40 ಸಾವಿರ ರೂಪಾಯಿ ಮೌಲ್ಯದ ಗೃಹೋಪಯೋಗಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Aug 20, 2026 09:06 AM
Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More