ಪುನೀತ್ ರಾಜ್​ಕುಮಾರ್ ಹೆಸರಿಗೆ ಮತ್ತೊಂದು ಪ್ರಶಸ್ತಿ

ಪುನೀತ್ ಕರ್ನಾಟಕ ಹಾಲು ಒಕ್ಕೂಟದ ರಾಯಭಾರಿ ಕೂಡ ಆಗಿದ್ದರು. ಈಗ ಕೆಎಂಎಫ್​ ಪುನೀತ್​ಗೆ ‘ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ’ ಘೋಷಿಸಿದೆ. ವಿಧಾನಸೌಧದಲ್ಲಿ ಸಹಕಾರ ಸಚಿವ ಸೋಮಶೇಖರ್ ಈ ಬಗ್ಗೆ ಹೇಳಿಕೆ ನೀಡಿದ್ದಾರೆ.

TV9kannada Web Team

| Edited By: Rajesh Duggumane

Mar 18, 2022 | 8:42 PM

ಪುನೀತ್ ರಾಜ್​ಕುಮಾರ್ (Puneeth Rajkumar) ಅವರು ಸಾಕಷ್ಟು ಕಂಪನಿ ಹಾಗೂ ಸರ್ಕಾರದ ಸಂಸ್ಥೆಗಳಿಗೆ ರಾಯಭಾರಿ ಆಗಿದ್ದರು. ಅವರು ಕರ್ನಾಟಕ ಹಾಲು ಒಕ್ಕೂಟದ (KMF) ರಾಯಭಾರಿ ಕೂಡ ಆಗಿದ್ದರು. ಈಗ ಕೆಎಂಎಫ್​ ಪುನೀತ್​ಗೆ ಮರಣೋತ್ತರವಾಗಿ ‘ಸಹಕಾರ ರತ್ನ ಪ್ರಶಸ್ತಿ’ ಘೋಷಿಸಿದೆ. ವಿಧಾನಸೌಧದಲ್ಲಿ ಸಹಕಾರ ಸಚಿವ ಸೋಮಶೇಖರ್ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ‘ಮಾ.20ರಂದು ರಾಜ್ಯ ಸರ್ಕಾರದಿಂದ ಪ್ರಶಸ್ತಿ ಪ್ರದಾನ ಮಾಡುತ್ತೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪುನೀತ್ ರಾಜ್​ಕುಮಾರ್ ಕೆಎಂಎಫ್​ ರಾಯಭಾರಿಯಾಗಿದ್ದರು. ಹೀಗಾಗಿ ಅವರಿಗೆ ಮರಣೋತ್ತರವಾಗಿ ಸಹಕಾರ ರತ್ನ ಪ್ರಶಸ್ತಿ ನೀಡುತ್ತಿದ್ದೇವೆ’ ಎಂದರು ಅವರು. ಈ ವಿಚಾರ ಅಪ್ಪು ಅಭಿಮಾನಿಗಳಿಗೆ ಖುಷಿ ನೀಡಿದೆ. ಕಳೆದ ವರ್ಷ ರಾಜ್ಯ ಸರ್ಕಾರ ಪುನೀತ್​ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಘೋಷಣೆ ಮಾಡಿತ್ತು. ಈ ಪ್ರಶಸ್ತಿ ಪ್ರದಾನ ಮಾಡುವ ದಿನಾಂಕವನ್ನು ಶೀಘ್ರವೇ ಘೋಷಣೆ ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದರು

ಇದನ್ನೂ ಓದಿ: ಹೆಲ್ಮೆಟ್​ ಜಾಗೃತಿ: ಪುನೀತ್​ ರಾಜ್​ಕುಮಾರ್​ ವಿಡಿಯೋ ನೋಡಿ ಪೊಲೀಸರ ಎದುರು ಅಶ್ವಿನಿ ಭಾವುಕ

‘ಲಕ್ಕಿ ಮ್ಯಾನ್​’ ಚಿತ್ರದಲ್ಲಿ ಪುನೀತ್​ ರಾಜ್​ಕುಮಾರ್ ಅಭಿಮಾನಿಗಳಿಗೆ ಇದೆ ಸರ್​ಪ್ರೈಸ್​; ಏನದು?

Follow us on

Click on your DTH Provider to Add TV9 Kannada