AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಎಸ್​ಟಿ ದರ ಭಾರಿ ಇಳಿಕೆ: ಗೃಹ ಸಚಿವ ಪರಮೇಶ್ವರ್​ ಏನಂದರು ನೋಡಿ

ಜಿಎಸ್​ಟಿ ದರ ಭಾರಿ ಇಳಿಕೆ: ಗೃಹ ಸಚಿವ ಪರಮೇಶ್ವರ್​ ಏನಂದರು ನೋಡಿ

Ganapathi Sharma
|

Updated on: Sep 04, 2025 | 11:55 AM

Share

ಕೇಂದ್ರ ಸರ್ಕಾರದ ಜಿಎಸ್​ಟಿ ದರ ಕಡಿತದ ಕುರಿತು ಗೃಹ ಸಚಿವ ಪರಮೇಶ್ವರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಾಮಾನ್ಯ ಜನರಿಗೆ ಅಗತ್ಯವಾದ ವಸ್ತುಗಳ ಮೇಲಿನ ಜಿಎಸ್​ಟಿ ದರ ಕಡಿತವನ್ನು ಅವರು ಸ್ವಾಗತಿಸಿದ್ದಾರೆ. ಆದರೆ, ರಾಜ್ಯಗಳಿಗೆ ಆಗುವ ಆರ್ಥಿಕ ನಷ್ಟದ ಬಗ್ಗೆಯೂ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಈ ನಷ್ಟವನ್ನು ಸರಿದೂಗಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್ 4: ಕೇಂದ್ರ ಸರ್ಕಾರದ ಜಿಎಸ್​ಟಿ ಕಡಿತ ನಿರ್ಧಾರವನ್ನು ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ ಸ್ವಾಗತಿಸಿದ್ದಾರೆ. ಅದೇ ರೀತಿ, ಕರ್ನಾಟಕಕ್ಕೆ 70,000 ಕೋಟಿ ರೂಪಾಯಿಗಳಷ್ಟು ನಷ್ಟವಾಗಬಹುದು ಎಂಬ ಆತಂಕದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಕೆಲವು ಅಗತ್ಯ ವಸ್ತುಗಳಿಗೆ 0% ಅಥವಾ 5% ಜಿಎಸ್​ಟಿ ಮಾಡಿರುವುದು ಒಳ್ಳೆಯ ಬೆಳವಣಿಗೆ. ಆದರೆ, ಕೆಲವು ವಸ್ತುಗಳ ಮೇಲಿನ ಜಿಎಸ್ಟಿ ದರಗಳು ಇನ್ನೂ ಹೆಚ್ಚೇ ಇವೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ