AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಕೋ ಬೇಡ್ವೋ ಗ್ಯಾರಂಟಿ ಕೊಟ್ಟಿದ್ದೇವೆ, ನಿಲ್ಲಿಸಿದ್ರೆ ಗಲಾಟೆ ಮಾಡ್ತಾರೆ - ಸಮಸ್ಯೆಯಲ್ಲಿ ಒದ್ದಾಡುತ್ತಿದ್ದೇವೆ: ಬಾಲಕೃಷ್ಣ

ಬೇಕೋ ಬೇಡ್ವೋ ಗ್ಯಾರಂಟಿ ಕೊಟ್ಟಿದ್ದೇವೆ, ನಿಲ್ಲಿಸಿದ್ರೆ ಗಲಾಟೆ ಮಾಡ್ತಾರೆ – ಸಮಸ್ಯೆಯಲ್ಲಿ ಒದ್ದಾಡುತ್ತಿದ್ದೇವೆ: ಬಾಲಕೃಷ್ಣ

ಪ್ರಶಾಂತ್​ ಬಿ.
| Edited By: |

Updated on: Sep 27, 2026 | 8:01 AM

Share

ಗ್ಯಾರಂಟಿ ಯೋಜನೆಗಳ ಜಾರಿಯಿಂದ ಸರ್ಕಾರಕ್ಕೆ ಕಷ್ಟ ಎದುರಾಗಿದೆ ಎಂದು ಸಚಿವ ಹೆಚ್.ಸಿ. ಬಾಲಕೃಷ್ಣ ರಾಮನಗರದಲ್ಲಿ ಹೇಳಿದ್ದಾರೆ. ಗ್ಯಾರಂಟಿಗಳನ್ನು ನಿಲ್ಲಿಸಿದರೆ ಪ್ರತಿಭಟನೆ ನಡೆಯುತ್ತದೆ, ನಿಲ್ಲಿಸದಿದ್ದರೆ ಆರ್ಥಿಕ ಹೊರೆಯನ್ನು ನಿಭಾಯಿಸುವುದು ಕಷ್ಟ. ಬರಗಾಲ ಮತ್ತು ರೈತರ ನೆರವಿನ ನಡುವೆ ಬಜೆಟ್ ಮಿತಿಗಳನ್ನು ಎದುರಿಸುತ್ತಿರುವ ಸರ್ಕಾರಕ್ಕೆ ಇದು ದೊಡ್ಡ ಸವಾಲಾಗಿದೆ ಎಂದು ಅವರು ವಿವರಿಸಿದ್ದಾರೆ.

ರಾಮನಗರ, ಸೆಪ್ಟೆಂಬರ್ 27: ‘ಉಚಿತ ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ಸಮಸ್ಯೆಯಲ್ಲಿ ಸಿಲುಕಿ ಒದ್ದಾಡುವಂತಾಗಿದೆ’ ಎಂದು ಸಚಿವ ಹೆಚ್​​ಸಿ ಬಾಲಕೃಷ್ಣ ಹೇಳಿದ್ದಾರೆ. ರಾಮನಗರದಲ್ಲಿ ದಿವ್ಯಾಂಗರ ಪ್ರತಿಭಟನೆ ನಿಮಿತ್ತ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಮಾತನಾಡಿದ ಅವರು, ‘ಬೇಕೋ ಬೇಡ್ವೋ ನಾವು ಗ್ಯಾರಂಟಿಗಳನ್ನು ಕೊಟ್ಟಿದ್ದೇವೆ. ಆದರೆ, ಈಗ ರಾಜ್ಯದಲ್ಲಿ ಬರಗಾಲ ಬಂದಿದೆ. ರೈತರಿಗೆ ಹಣ ನೀಡಬೇಕು. ಕೊಡದಿದ್ದರೆ ಅವರೂ ಪ್ರತಿಭಟನೆ ಮಾಡುತ್ತಾರೆ. ಒಂದು ವೇಳೆ ಗ್ಯಾರಂಟಿಗಳನ್ನು ನಿಲ್ಲಿಸಿದರೆ, ಜನರು ಪ್ರತಿಭಟನೆ ನಡೆಸುತ್ತಾರೆ. ಗ್ಯಾರಂಟಿಗಳು ಇಲ್ಲದಿದ್ರೆ ನಮಗೆ ಇದೆಲ್ಲ ಸಮಸ್ಯೆಯೇ ಆಗುತ್ತಿರಲಿಲ್ಲ, ಹೇಗೋ ನಿರ್ವಹಿಸುತ್ತಿದ್ದೆವು. ಈಗ ಈ ಸಮಸ್ಯೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದೇವೆ’ ಎಂದು ಅಳಲು ತೋಡಿಕೊಂಡಿದ್ದಾರೆ.

‘ಗ್ಯಾರಂಟಿ ಯೋಜನೆಗಳು ಇಲ್ಲದಿದ್ದರೆ ಇವೆಲ್ಲಾ ಸಮಸ್ಯೆಗಳೇ ಆಗುತ್ತಿರಲಿಲ್ಲ’ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ. ಸರ್ಕಾರದ ಮುಂದೆ ಹಲವು ಸವಾಲುಗಳಿದ್ದು, ಬಜೆಟ್ ಮಿತಿಗಳೊಳಗೆ ಎಲ್ಲವನ್ನೂ ನಿರ್ವಹಿಸಬೇಕಿದೆ. ನೌಕರರಿಗೆ ಸಂಬಳ, ಅಭಿವೃದ್ಧಿ ಕಾರ್ಯಗಳು ಮತ್ತು ರೈತರಿಗೆ ನೆರವು ಸೇರಿದಂತೆ ವಿವಿಧ ವೆಚ್ಚಗಳನ್ನು ಸರ್ಕಾರ ನಿಭಾಯಿಸಬೇಕಿದೆ. ಸದ್ಯದ ಆರ್ಥಿಕ ಪರಿಸ್ಥಿತಿಯಲ್ಲಿ ಇವೆಲ್ಲವನ್ನು ಸಮನ್ವಯಗೊಳಿಸುವುದು ಕಷ್ಟಕರವಾಗಿದೆ ಎಂದು ಬಾಲಕೃಷ್ಣ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಶಾಂತ್​ ಬಿ.
ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More