ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ಕೆಎನ್ ರಾಜಣ್ಣ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಸಚಿವ ಕೆ.ಎನ್.ರಾಜಣ್ಣ ಅವರ ರಾಜೀನಾಮೆಯ ವಿಚಾರವನ್ನು ವಿಪಕ್ಷ ನಾಯಕರು ಪ್ರಸ್ತಾಪಿಸಿದರು. ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದಾರಾ ಎಂದು ಬಿಜೆಪಿ ಪ್ರಶ್ನಸಿತು. ರಾಜಣ್ಣ ಅವರು ಬಿಜೆಪಿಯದ್ದು ಕೀಳುಮಟ್ಟದ ರಾಜಕಾರಣ ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳು ಈ ಬಗ್ಗೆ ಮಾಹಿತಿ ನೀಡುವುದಾಗಿ ಕೆಎನ್ ರಾಜಣ್ಣ ತಿಳಿಸಿದ್ದಾರೆ.
ಬೆಂಗಳೂರು, ಆಗಸ್ಟ್ 11: ಶಾಸಕ ಕೆಎನ್ ರಾಜಣ್ಣ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ವಿಚಾರವನ್ನು ವಿಪಕ್ಷ ನಾಯಕ ಆರ್ ಅಶೋಕ ಅಧಿವೇಶನದಲ್ಲಿ ಪ್ರಸ್ತಾಪಿಸಿದರು. 2 ಗಂಟೆ ಹಿಂದೆಯೇ ಕೆಎನ್ ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಯಾವ ಕಾರಣಕ್ಕೆ ಕೆ.ಎನ್.ರಾಜಣ್ಣ ರಾಜೀನಾಮೆ ಕೊಟ್ಟಿದ್ದಾರೆ. ಸಚಿವ ಕೆ.ಎನ್.ರಾಜಣ್ಣ ವಿರುದ್ಧ ಇರುವ ಭ್ರಷ್ಟಾಚಾರ ಏನು? ಎಷ್ಟು ಹಣ ಹೊಡೆದಿದ್ದಾರೆ, ಎಲ್ಲಿ ಇಟ್ಟಿದ್ದಾರೆಂಬ ಮಾಹಿತಿ ಬೇಕು ಎಂದು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಶೋಕ್ ಆಗ್ರಹಿಸಿದರು.
ಇದಕ್ಕೆ ಉತ್ತರಿಸಿದ ಮಾಜಿ ಸಚಿವ ಕೆಎನ್ ರಾಜಣ್ಣ, ಕೀಳುಮಟ್ಟದ ರಾಜಕಾರಣ ಮಾಡುತ್ತಿರುವ ಬಿಜೆಪಿಯವರಿಗೆ ನಾಚಿಕೆಯಾಗಬೇಕು. ನಾನು ರಾಜೀನಾಮೆ ಕೊಟ್ಟಿದ್ದೇನೋ, ಬಿಟ್ಟಿದ್ದೇನೋ ಬೇರೆ ವಿಚಾರ. ನನ್ನ ರಾಜೀನಾಮೆ ಬಗ್ಗೆ ಸಿಎಂ ಹೇಳುತ್ತಾರೆ ಎಂದರು.
ಈ ವೇಳೆ ರಾಜಣ್ಣ ಹೇಳಿಕೆಗೆ ವಿಪಕ್ಷ ನಾಯಕ ಅಶೋಕ್ ಪ್ರತಿಕ್ರಿಯಿಸಿ, ನಾಚಿಕೆ ಆಗಲ್ವಾ ಅನ್ನೋ ಪದವನ್ನು ನಾನು ಬಳಸಿಲ್ಲ. ರಾಜೀನಾಮೆ ನೀಡಿ ಅಲ್ಲಿ ಯಾಕೆ ಕುಳಿತಿದ್ದೀರಿ ಎಂದು ಹೇಳಿದ್ದೇನೆ. ಪ್ರಜಾಪ್ರಭುತ್ವದಲ್ಲಿ ಸತ್ಯ ಹೇಳಬಾರದಾ? ಎಂದು ಪ್ರಶ್ನಿಸಿದರು.
ಕರ್ನಾಟಕ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

