ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಸದನದಲ್ಲಿ ಅಶೋಕ್ ಪ್ರಶ್ನೆ
ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಅವರು ಸಚಿವ ಕೆ.ಎನ್. ರಾಜಣ್ಣ ಅವರ ರಾಜೀನಾಮೆಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜೀನಾಮೆಯ ನಿಜವಾದ ಕಾರಣವೇನು ಎಂಬುದರ ಕುರಿತು ಸರ್ಕಾರ ಸ್ಪಷ್ಟನೆ ನೀಡಬೇಕೆಂದು ಒತ್ತಾಯಿಸಿದ್ದಾರೆ. ಈ ರಾಜೀನಾಮೆಯಿಂದ ಸರ್ಕಾರದ ಮೇಲೆ ಭಾರೀ ಒತ್ತಡ ಬಿದ್ದಿದೆ.
ಬೆಂಗಳೂರು, ಆಗಸ್ಟ್ 11: ಶಾಸಕ ಕೆಎನ್ ರಾಜಣ್ಣ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ವಿಚಾರವನ್ನು ವಿಪಕ್ಷ ನಾಯಕ ಆರ್ ಅಶೋಕ ಅಧಿವೇಶನದಲ್ಲಿ ಪ್ರಸ್ತಾಪಿಸಿದರು. 2 ಗಂಟೆ ಹಿಂದೆಯೇ ಕೆಎನ್ ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಯಾವ ಕಾರಣಕ್ಕೆ ಕೆ.ಎನ್.ರಾಜಣ್ಣ ರಾಜೀನಾಮೆ ಕೊಟ್ಟಿದ್ದಾರೆ. ಸಚಿವ ಕೆ.ಎನ್.ರಾಜಣ್ಣ ವಿರುದ್ಧ ಇರುವ ಭ್ರಷ್ಟಾಚಾರ ಏನು? ಎಷ್ಟು ಹಣ ಹೊಡೆದಿದ್ದಾರೆ, ಎಲ್ಲಿ ಇಟ್ಟಿದ್ದಾರೆಂಬ ಮಾಹಿತಿ ಬೇಕು. ಕೆಎನ್ ರಾಜಣ್ಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿದ್ದವರು. ಅವರ ರಾಜೀನಾಮೆ ಪಡೆಯಲು ಕಾರಣವೇನು? ಇದಕ್ಕೆ ಸರ್ಕಾರ ಉತ್ತರ ನೀಡಬೇಕು ಎಂದು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಶೋಕ್ ಪ್ರಶ್ನಿಸಿದರು.
Latest Videos
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

