ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಸದನದಲ್ಲಿ ಅಶೋಕ್​ ಪ್ರಶ್ನೆ

ವಿವೇಕ ಬಿರಾದಾರ

Updated on: Aug 11, 2025 | 4:38 PM

ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಅವರು ಸಚಿವ ಕೆ.ಎನ್. ರಾಜಣ್ಣ ಅವರ ರಾಜೀನಾಮೆಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜೀನಾಮೆಯ ನಿಜವಾದ ಕಾರಣವೇನು ಎಂಬುದರ ಕುರಿತು ಸರ್ಕಾರ ಸ್ಪಷ್ಟನೆ ನೀಡಬೇಕೆಂದು ಒತ್ತಾಯಿಸಿದ್ದಾರೆ. ಈ ರಾಜೀನಾಮೆಯಿಂದ ಸರ್ಕಾರದ ಮೇಲೆ ಭಾರೀ ಒತ್ತಡ ಬಿದ್ದಿದೆ.

ಬೆಂಗಳೂರು, ಆಗಸ್ಟ್​ 11: ಶಾಸಕ ಕೆಎನ್​ ರಾಜಣ್ಣ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ವಿಚಾರವನ್ನು ವಿಪಕ್ಷ ನಾಯಕ ಆರ್ ಅಶೋಕ ಅಧಿವೇಶನದಲ್ಲಿ ಪ್ರಸ್ತಾಪಿಸಿದರು. 2 ಗಂಟೆ ಹಿಂದೆಯೇ ಕೆಎನ್​ ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಯಾವ ಕಾರಣಕ್ಕೆ ಕೆ.ಎನ್.ರಾಜಣ್ಣ ರಾಜೀನಾಮೆ ಕೊಟ್ಟಿದ್ದಾರೆ. ಸಚಿವ ಕೆ.ಎನ್.ರಾಜಣ್ಣ ವಿರುದ್ಧ ಇರುವ ಭ್ರಷ್ಟಾಚಾರ ಏನು? ಎಷ್ಟು ಹಣ ಹೊಡೆದಿದ್ದಾರೆ, ಎಲ್ಲಿ ಇಟ್ಟಿದ್ದಾರೆಂಬ ಮಾಹಿತಿ ಬೇಕು. ಕೆಎನ್​ ರಾಜಣ್ಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿದ್ದವರು. ಅವರ ರಾಜೀನಾಮೆ ಪಡೆಯಲು ಕಾರಣವೇನು? ಇದಕ್ಕೆ ಸರ್ಕಾರ ಉತ್ತರ ನೀಡಬೇಕು ಎಂದು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಶೋಕ್ ಪ್ರಶ್ನಿಸಿದರು.

Loading...
Unable to load recommendations.
Follow Us
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.