AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಅಸಮಾಧಾನ

ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಅಸಮಾಧಾನ

ಅರುಣ್ ಕುಮಾರ್​ ಆರ್​.
| Edited By: |

Updated on:Sep 30, 2026 | 5:57 PM

Share

ಸಚಿವ ಕೃಷ್ಣಬೈರೇಗೌಡರು ಸರ್ಜಾಪುರದ ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿಯನ್ನು ಪರಿಶೀಲಿಸಿದ್ದು, ನಿರ್ಮಾಣದ ನಿಧಾನಗತಿ ಮತ್ತು ವಿಳಂಬದ ಬಗ್ಗೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭೂಸ್ವಾಧೀನ, ಸರ್ವಿಸ್ ರಸ್ತೆ ಮತ್ತು ಡ್ರೈನೇಜ್ ಯೋಜನೆಗಳ ಕೊರತೆಯಂತಹ ಸಮಸ್ಯೆಗಳನ್ನು ಚರ್ಚಿಸಿ, ಅಧಿಕಾರಿಗಳಿಗೆ ಕಾಮಗಾರಿ ವೇಗ ಹೆಚ್ಚಿಸುವಂತೆ ಮತ್ತು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್​​ 30: ಸಚಿವ ಕೃಷ್ಣಬೈರೇಗೌಡ ಅವರು ಸರ್ಜಾಪುರ ಸಮೀಪದ ದೊಮ್ಮಸಂದ್ರ ಫ್ಲೈಓವರ್ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿ, ಕಾರ್ಯಪ್ರಗತಿಯ ಬಗ್ಗೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಈ ವೇಳೆ ಕಾಮಗಾರಿಯ ನಿಧಾನಗತಿ ಮತ್ತು ವಿಳಂಬದ ಬಗ್ಗೆ ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪ್ರಸಂಗವೂ ನಡೆದಿದೆ. ಕಾಮಗಾರಿ ಸ್ಥಳದಲ್ಲಿ ಟ್ರಾಫಿಕ್ ನಿರ್ವಹಣೆ ಮತ್ತು ಸಾರ್ವಜನಿಕರಿಗೆ ಆಗುತ್ತಿರುವ ಅನಾನುಕೂಲಗಳನ್ನು ತಪ್ಪಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Sep 30, 2026 05:57 PM

Follow Us
ಅರುಣ್ ಕುಮಾರ್​ ಆರ್​.
ಅರುಣ್ ಕುಮಾರ್​ ಆರ್​.

ಅರುಣ್ ಕುಮಾರ್ ಆರ್. ಬೆಂಗಳೂರಿನ ಜ್ಞಾನಭಾರತಿ ವಿವಿಯಲ್ಲಿ ಸಮೂಹ ಸಂವಹನ ಹಾಗೂ ತಂತ್ರಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ ಟಿವಿ9 ಕನ್ನಡದಲ್ಲಿ ಮೆಟ್ರೋ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಜಿಬಿಎ ಹಾಗೂ ನಗರದ ಅಭಿವೃದ್ಧಿ ಕ್ಷೇತ್ರದಲ್ಲಿ ಒಂದು ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಇವರು, ಒಟ್ಟು 2 ವರ್ಷಗಳ ವರದಿಗಾರಿಕೆ ಅನುಭವದೊಂದಿಗೆ ಜನೋಪಯೋಗಿ ವಿಷಯಗಳ ಕುರಿತು ವರದಿ ಮಾಡುತ್ತಿದ್ದಾರೆ.

Read More