ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಅಸಮಾಧಾನ
ಸಚಿವ ಕೃಷ್ಣಬೈರೇಗೌಡರು ಸರ್ಜಾಪುರದ ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿಯನ್ನು ಪರಿಶೀಲಿಸಿದ್ದು, ನಿರ್ಮಾಣದ ನಿಧಾನಗತಿ ಮತ್ತು ವಿಳಂಬದ ಬಗ್ಗೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭೂಸ್ವಾಧೀನ, ಸರ್ವಿಸ್ ರಸ್ತೆ ಮತ್ತು ಡ್ರೈನೇಜ್ ಯೋಜನೆಗಳ ಕೊರತೆಯಂತಹ ಸಮಸ್ಯೆಗಳನ್ನು ಚರ್ಚಿಸಿ, ಅಧಿಕಾರಿಗಳಿಗೆ ಕಾಮಗಾರಿ ವೇಗ ಹೆಚ್ಚಿಸುವಂತೆ ಮತ್ತು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 30: ಸಚಿವ ಕೃಷ್ಣಬೈರೇಗೌಡ ಅವರು ಸರ್ಜಾಪುರ ಸಮೀಪದ ದೊಮ್ಮಸಂದ್ರ ಫ್ಲೈಓವರ್ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿ, ಕಾರ್ಯಪ್ರಗತಿಯ ಬಗ್ಗೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಈ ವೇಳೆ ಕಾಮಗಾರಿಯ ನಿಧಾನಗತಿ ಮತ್ತು ವಿಳಂಬದ ಬಗ್ಗೆ ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪ್ರಸಂಗವೂ ನಡೆದಿದೆ. ಕಾಮಗಾರಿ ಸ್ಥಳದಲ್ಲಿ ಟ್ರಾಫಿಕ್ ನಿರ್ವಹಣೆ ಮತ್ತು ಸಾರ್ವಜನಿಕರಿಗೆ ಆಗುತ್ತಿರುವ ಅನಾನುಕೂಲಗಳನ್ನು ತಪ್ಪಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Sep 30, 2026 05:57 PM
Loading...
Unable to load recommendations.
Follow Us
