ಗೃಹ ಲಕ್ಷ್ಮಿ ಹಣ ಬಿಡುಗಡೆ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಿಗ್ ಅಪ್ಡೇಟ್
ಕರ್ನಾಟಕ ಸರ್ಕಾರದ ಗೃಹಲಕ್ಷ್ಮೀ ಯೋಜನೆಯು ಅನೇಕ ಮಹಿಳೆಯರಿಗೆ ಆರ್ಥಿಕ ನೆರವು ನೀಡುತ್ತಿದೆ. ಆದರೆ, ಕೆಲವರು ಎರಡು ತಿಂಗಳ ಹಣವನ್ನು ಪಡೆಯದೆ ಇರುವುದಾಗಿ ದೂರಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾರ್ಚ್ ಮತ್ತು ಏಪ್ರಿಲ್ ತಿಂಗಳ ಪಾವತಿಯಲ್ಲಿ ವಿಳಂಬವಾಗಿರುವುದಕ್ಕೆ ಕಾರಣಗಳನ್ನು ವಿವರಿಸಿದ್ದಾರೆ ಮತ್ತು ಶೀಘ್ರದಲ್ಲೇ ಪಾವತಿ ಮಾಡುವ ಭರವಸೆ ನೀಡಿದ್ದಾರೆ. ಯೋಜನೆಯ ಪ್ರಭಾವ ಮತ್ತು ಸಮಸ್ಯೆಗಳನ್ನು ಈ ಲೇಖನ ಚರ್ಚಿಸುತ್ತದೆ.
ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಯೋಜನೆ ಸಾಕಷ್ಟು ಮಹಿಳೆಯರಿಗೆ ಅನುಕೂಲವಾಗಿದೆ. ಕೆಲವರು ಇದೇ ಹಣದಲ್ಲಿ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಇನ್ನೂ ಕೆಲವರು ಸಮಾಜಕ್ಕೂ ಅನುಕೂಲ ಮಾಡಿ ಮಾದರಿಯಾಗಿದ್ದಾರೆ. ಆದರೆ ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣ ಬಂದಿಲ್ಲ ಎಂದು ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದು, ಏಪ್ರಿಲ್ ತಿಂಗಳದ್ದು ಹಣ ಬಿಲ್ಲಿಂಗ್ ಆಗುತ್ತಿದೆ. ಮಾರ್ಚ್ ತಿಂಗಳದ್ದು ಇಯರ್ ಎಂಡ್ ಆಗಿದ್ದರಿಂದ ತಡವಾಗಿದೆ. ಆದಷ್ಟು ಬೇಗ ಹಣ ಹಾಕುತ್ತೇವೆ ಎಂದು ಹೇಳಿದರು.