ಸಿಟಿ ರವಿ ವಿರುದ್ಧ ರಾಷ್ಟ್ರಪತಿಗೆ ಪತ್ರ ಬರೆಯುವೆ, ಪ್ರಧಾನಿ ಮೋದಿ ಭೇಟಿ ಮಾಡುವೆ: ಲಕ್ಷ್ಮೀ ಹೆಬ್ಬಾಳ್ಕರ್
ಒಂದೆಡೆ, ಸಿಟಿ ರವಿ ವಿಧಾನ ಪರಿಷತ್ ಕಲಾಪದಲ್ಲಿ ಸಚಿವೆ ವಿರುದ್ಧ ಅಶ್ಲೀಲ ಪದ ಬಳಸಿ ನಿಂದಿಸಿದ್ದಾರೆ ಎನ್ನಲಾದ ಪ್ರಕರಣ ಮುಗಿದುಹೋದ ಅಧ್ಯಾಯ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದರೆ, ಮತ್ತೊಂದೆಡೆ ರಾಷ್ಟ್ರಪತಿಗಳಿಗೂ ದೂರು ನೀಡುವೆ. ವಿಡಿಯೋ ದಾಖಲೆ ಇದೆ, ಪ್ರಧಾನಿ ಮೋದಿ ಭೇಟಿಯಾಗಿ ಅವರಿಗೂ ನೀಡುವೆ ಎಂದಿದ್ದಾರೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್.
ಬೆಳಗಾವಿ, ಡಿಸೆಂಬರ್ 23: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನ ಪರಿಷತ್ ಕಲಾಪದ ವೇಳೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವಾಚ್ಯ ಶಬ್ದಗಳಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ನಿಂದಿಸಿದ ವಿಚಾರ ಕೊನೆಗೊಳ್ಳುವ ಲಕ್ಷಣಗಳು ಕಾಣಿಸುತ್ತಿಲ್ಲ. ಈ ವಿಚಾರವಾಗಿ ಪೊಲೀಸರು ಹಸ್ತಕ್ಷೇಪ ಮಾಡಬಾರದು. ಎರಡೂ ಕಡೆಯಿಂದ ನಮಗೆ ಯಾವುದೇ ದೂರು ಬಂದಿಲ್ಲ. ಹಕ್ಕುಚ್ಯುತಿ ಆಗಿದೆ ಅಂತ ದೂರು ಕೊಟ್ಟರೆ ನಂತರ ಕ್ರಮ ಕೈಗೊಳ್ಳುತ್ತೇವೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಆದರೆ, ತಣ್ಣಗಾಗದ ಹೆಬ್ಬಾಳ್ಕರ್ ರಾಷ್ಟ್ರಪತಿಗಳಿಗೆ ದೂರು ನೀಡುವುದಾಗಿ ಹೇಳಿದ್ದಾರೆ.
ಸಿಟಿ ರವಿ ಅವಾಚ್ಯ ಶಬ್ದ ಬಳಸಿದ್ದಕ್ಕೆ ಎಲ್ಲ ದಾಖಲೆ ಇದೆ. ಈ ವಿಚಾರವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ದೂರು ನೀಡುವೆ. ವಿಡಿಯೋ ದಾಖಲೆ ಇದ್ದು, ಅದನ್ನು ಕೊಡುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಅವರಿಗೂ ಮಾಹಿತಿ ನೀಡುವೆ ಎಂದರು. ಲಕ್ಷ್ಮೀ ಹೆಬ್ಬಾಳ್ಕರ್ ಮಾತಿನ ವಿವರ ಇಲ್ಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ