ಡಿಸೆಂಬರ್ ಒಳಗೆ 17,000 ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

Updated on: Oct 14, 2026 | 1:30 PM

ಡಿಸೆಂಬರ್ ಒಳಗೆ 17,000 ಶಿಕ್ಷಕರನ್ನು ನೇಮಕ ಮಾಡುವ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. 1,200 ಕೆಪಿಎಸ್ ಶಾಲೆಗಳಿಗೆ ನವೆಂಬರ್‌ನಲ್ಲಿ ಗುದ್ದಲಿ ಪೂಜೆ ನೆರವೇರಿಸುವ ಯೋಜನೆ ಇದೆ. ದಸರಾ ಆಚರಣೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ರಜಾ ದಿನಗಳಲ್ಲೂ ಗ್ರಂಥಾಲಯ ತೆರೆಯುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧರಿಸುವುದಾಗಿ ಅವರು ಹೇಳಿದರು.

ಕರ್ನಾಟಕದಲ್ಲಿ ಶಿಕ್ಷಕರ ಕೊರತೆಯನ್ನು ನಿವಾರಿಸಲು ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆ ಇರಿಸಿದೆ. ಡಿಸೆಂಬರ್ ತಿಂಗಳೊಳಗೆ 17,000 ಶಿಕ್ಷಕರನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಘೋಷಿಸಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ಹೋರಾಡಿ, ಹಿಂದಿನ ಸರ್ಕಾರದಿಂದ ಬಾಕಿ ಉಳಿದಿದ್ದ 13,500 ಶಿಕ್ಷಕರ ನೇಮಕಾತಿಯನ್ನು ಈಗಾಗಲೇ ಪೂರ್ಣಗೊಳಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಇದರೊಂದಿಗೆ, ಅನುದಾನಿತ ಶಾಲೆಗಳಿಗೆ (Aided Schools) 6,000 ಶಿಕ್ಷಕರನ್ನು ನೇಮಿಸಲು ಸರ್ಕಾರದಿಂದ ಅನುಮತಿ ದೊರೆತಿದ್ದು, ಈ ಪ್ರಕ್ರಿಯೆಯೂ ಡಿಸೆಂಬರ್ ಅಥವಾ ಜನವರಿ ವೇಳೆಗೆ ಅಂತ್ಯಗೊಳ್ಳಲಿದೆ. ಶಿಕ್ಷಕರ ನೇಮಕಾತಿಯು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಅನುಕೂಲ ಒದಗಿಸಲಿದೆ ಎಂದು ಅವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

 

Loading...
Unable to load recommendations.
Follow Us
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More