AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ನೀಡುವಂತೆ ಮನವಿ ನೀಡಿದವರ ಬಳಿ ಸಚಿವ ಮಧು ಬಂಗಾರಪ್ಪ ದರ್ಪ: ವಿಡಿಯೋ ವೈರಲ್

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ನೀಡುವಂತೆ ಮನವಿ ನೀಡಿದವರ ಬಳಿ ಸಚಿವ ಮಧು ಬಂಗಾರಪ್ಪ ದರ್ಪ: ವಿಡಿಯೋ ವೈರಲ್

ಶಿವಕುಮಾರ್ ಪತ್ತಾರ್
| Edited By: |

Updated on: Nov 22, 2026 | 1:18 PM

Share

ಕೊಪ್ಪಳದಲ್ಲಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಹಾಗೂ ಪಠ್ಯಪುಸ್ತಕ ವಿತರಣೆ ವಿಳಂಬ ಕುರಿತು ಮನವಿ ಸಲ್ಲಿಸಲು ಬಂದ ದೇವರಾಜ್ ಕಿನ್ನಾಳ್ ಅವರೊಂದಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ದರ್ಪದಿಂದ ವರ್ತಿಸಿದ್ದಾರೆ. ‘‘ಕೇಳುವ ಯೋಗ್ಯತೆ ಇಲ್ಲ’’ ಎಂದು ಸಚಿವರು ಗರಂ ಆದ ವಿಡಿಯೋ ವೈರಲ್ ಆಗಿದೆ. ಸಚಿವರ ಈ ವರ್ತನೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕ್ಷಮೆ ಯಾಚಿಸುವಂತೆ ಆಗ್ರಹಿಸಿದ್ದಾರೆ.

ಕೊಪ್ಪಳ, ನವೆಂಬರ್ 22: ಕೊಪ್ಪಳದಲ್ಲಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಹಾಗೂ ಪಠ್ಯಪುಸ್ತಕ ವಿತರಣೆ ವಿಳಂಬ ಕುರಿತು ಮನವಿ ಸಲ್ಲಿಸಲು ಬಂದವರೊಂದಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ದರ್ಪ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಚಿವರ ವರ್ತನೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ 21,964 ಮಕ್ಕಳಿಗೆ ಇನ್ನೂ ಶೂ ಮತ್ತು ಸಾಕ್ಸ್ ತಲುಪಿಲ್ಲ ಹಾಗೂ 64,000ಕ್ಕೂ ಹೆಚ್ಚು ಮಕ್ಕಳಿಗೆ ಎರಡನೇ ಸೆಮಿಸ್ಟರ್ ಪಠ್ಯಪುಸ್ತಕಗಳು ಬಂದಿಲ್ಲ ಎಂದು ಮಾಜಿ ಎಸ್‌ಡಿಎಂಸಿ ಅಧ್ಯಕ್ಷ ದೇವರಾಜ್ ಕಿನ್ನಾಳ್ ಅವರು ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಸಚಿವರು ಕಿನ್ನಾಳ್ ಅವರಿಗೆ ‘‘ಕೇಳುವ ಯೋಗ್ಯತೆ ಇಲ್ಲ ಅಂದ್ರೆ ಸುಮ್ಮನಿರಿ’’ ಎಂದು ಗರಂ ಆಗಿ ಮಾತನಾಡಿರುವುದು ವಿಡಿಯೋದಲ್ಲಿ ಕಾಣಿಸಿದೆ.

ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯಿಸಿದ್ದು, ಸಚಿವರ ವರ್ತನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಶಿಕ್ಷಣ ಸಚಿವರು ತಕ್ಷಣವೇ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಈ ಘಟನೆಯು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಶಿವಕುಮಾರ್ ಪತ್ತಾರ್
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More