ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು, ಮೋದಿ ಜೊತೆ ನಾವಿದ್ದೇವೆ; ಎಂ.ಬಿ. ಪಾಟೀಲ್

Edited By:

Updated on: Apr 29, 2025 | 4:12 PM

ಕಾಶ್ಮೀರದಲ್ಲಿ ಮತ್ತೆ ಪ್ರವಾಸೋದ್ಯಮ ಆರಂಭವಾಗಬೇಕು. ಪೆಹಲ್ಗಾಮ್ ಭಾರತದ ಸ್ವಿಟ್ಜರ್ಲೆಂಡ್‌‌. ಮತ್ತೆ ಅಲ್ಲಿ ಪ್ರವಾಸೋದ್ಯಮ ಶುರುವಾಗಬೇಕು. ಅದಕ್ಕೆ ಸೂಕ್ತ ಕ್ರಮಗಳನ್ನು ಕೇಂದ್ರ ಸರ್ಕಾರ ತೆಗೆದುಕೊಳ್ಳಬೇಕು. ಮಾನವೀಯತೆಯಲ್ಲಿ ನಂಬಿಕೆ ಇಟ್ಟವರು ಪೆಹಲ್ಗಾಮ್ ಘಟನೆ ಖಂಡಿಸಬೇಕು. ಉಗ್ರರು ಮಾಡಿದ್ದು ಹೇಡಿತನದ ಕೃತ್ಯ. ಹುಡುಕಿ ಹುಡುಕಿ ಉಗ್ರರನ್ನ ಕೊಲ್ಲಬೇಕು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನವನ್ನು ಮೂಲೆಗುಂಪು ಮಾಡಬೇಕು ಎಂದು ವಿಜಯಪುರ ನಗರದಲ್ಲಿ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.

ವಿಜಯಪುರ, ಏಪ್ರಿಲ್ 29: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯ (Pahalgam Terror Attack) ಹಿನ್ನೆಲೆಯಲ್ಲಿ ಪಾಕಿಸ್ತಾನದ ವಿರುದ್ಧ ಸಚಿವ ಎಂ.ಬಿ ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ. ಪಾಕಿಸ್ತಾನ ಒಂದು ದರಿದ್ರ ದೇಶ. ಅದಕ್ಕೆ ಬೇರೆ ಕೆಲಸ ಇಲ್ಲ. ಅವರ ದೇಶದಲ್ಲೇ ಅವರ ಪರಿಸ್ಥಿತಿ ಹೀನಾಯವಾಗಿದೆ. ಯುದ್ಧಕ್ಕೆ ಹೆದರಿ ಪಾಕಿಸ್ತಾನದ ಸೈನಿಕರು, ಅಧಿಕಾರಿಗಳು ಓಡಿ ಹೋಗಿದ್ದಾರೆ. ಪಹಲ್ಗಾಮ್ ಘಟನೆ ಹೇಡಿಗಳ ಕೃತ್ಯ, ಹೇಯ ಕೃತ್ಯ. ಈಗ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಈ ವಿಚಾರದಲ್ಲಿ ನಾವು ರಾಜಕೀಯ ಮಾಡಲ್ಲ. ಕೇಂದ್ರ ಸರ್ಕಾರದ ಜೊತೆಗೆ, ಮೋದಿ ಜೊತೆಗೆ ಎಲ್ಲ ರಾಜಕೀಯ ಪಕ್ಷಗಳಿವೆ. ಯುದ್ಧ ಬಹಳ ಎಚ್ಚರಿಕೆಯಿಂದ, ಪರಿಣಾಮಕಾರಿಯಾಗಿ ಆಗಬೇಕು ಎಂದು ಎಂ.ಬಿ. ಪಾಟೀಲ್ ಆಕ್ರೋಶ ಹೊರಹಾಕಿದ್ದಾರೆ.

ಸೂಕ್ತ ಸೇನೆ ಪೊಲೀಸ್ ವ್ಯವಸ್ಥೆ ಬೇಕು. ಆಯಕಟ್ಟಿನ ಜಾಗದಲ್ಲಿ ಸೇನೆಯನ್ನು ನೇಮಿಸಬೇಕು. ಕಾಶ್ಮೀರದಲ್ಲಿ ಮತ್ತೆ ಪ್ರವಾಸೋದ್ಯಮ ಆರಂಭವಾಗಬೇಕು. ಪೆಹಲ್ಗಾಮ್ ಭಾರತದ ಸ್ವಿಟ್ಜರ್ಲೆಂಡ್‌‌. ಮತ್ತೆ ಅಲ್ಲಿ ಪ್ರವಾಸೋದ್ಯಮ ಶುರುವಾಗಬೇಕು. ಅದಕ್ಕೆ ಸೂಕ್ತ ಕ್ರಮಗಳನ್ನು ಕೇಂದ್ರ ಸರ್ಕಾರ ತೆಗೆದುಕೊಳ್ಳಬೇಕು. ಮಾನವೀಯತೆಯಲ್ಲಿ ನಂಬಿಕೆ ಇಟ್ಟವರು ಪೆಹಲ್ಗಾಮ್ ಘಟನೆ ಖಂಡಿಸಬೇಕು. ಉಗ್ರರು ಮಾಡಿದ್ದು ಹೇಡಿತನದ ಕೃತ್ಯ. ಹುಡುಕಿ ಹುಡುಕಿ ಉಗ್ರರನ್ನ ಕೊಲ್ಲಬೇಕು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನವನ್ನು ಮೂಲೆಗುಂಪು ಮಾಡಬೇಕು. ಕಾಶ್ಮೀರದಲ್ಲಿಯೂ ಪಾಕಿಸ್ತಾನಕ್ಕೆ ಬೆಂಬಲ‌ ಇಲ್ಲ. ಕಾಶ್ಮೀರಿಗಳು ಭಾರತದ ಪರ, ಶಾಂತಿಯ ಕಡೆಗೆ ಇದ್ದಾರೆ. ಟೂರಿಸಂ ಡೆವಲಪ್ಮೆಂಟ್ ಆದ ಮೇಲೆ ಉಗ್ರರಿಗೆ ನೋಡಲು ಆಗಿಲ್ಲ. ಅದನ್ನು ಕೆಡಿಸಬೇಕೆಂದೇ ಈ ದಾಳಿ ನಡೆಸಿದ್ದಾರೆ ಎಂದು ವಿಜಯಪುರ ನಗರದಲ್ಲಿ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More