ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ ಸಚಿವ ನಾಗೇಂದ್ರ
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತವನ್ನು ಸಚಿವ ನಾಗೇಂದ್ರ ಅವರು ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ತಮ್ಮನ್ನು ಅನಗತ್ಯವಾಗಿ ಟಾರ್ಗೆಟ್ ಮಾಡಲಾಗುತ್ತಿದ್ದು, ಇದರಿಂದ ಪಕ್ಷಕ್ಕೆ ಮುಜುಗರವಾಗುವುದು ಬೇಡ ಎಂದು ಹೇಳಿದ್ದಾರೆ. ಈ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ತಿಳಿಸಿದ್ದಾರೆ.
ಬೆಂಗಳೂರು, ಆಗಸ್ಟ್ 26: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಮುಂದಿಟ್ಟುಕೊಂಡು ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳು ಪಟ್ಟುಹಿಡಿದಿದ್ದು, ಅದರ ಪರಿಣಾಮ ವಿಧಾನಸಭೆ ಮುಂಗಾರು ಅಧಿವೇಶನವೇ ಪೂರ್ಣಗೊಳ್ಳದೆ ಸ್ಥಗಿತಗೊಂಡಿದೆ. ಇದೀಗ ಮತ್ತೆ ಹೋರಾಟ ಮುಂದುವರಿಸಲು ಬಿಜೆಪಿ ಹಾಗೂ ಜೆಡಿಎಸ್ ಮುಂದಾಗಿವೆ. ಈ ಬೆಳವಣಿಗೆಗಳ ಬೆನ್ನಲ್ಲೇ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಎಂಬುದು ತಿಳಿದುಬಂದಿದೆ. ಈ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಜತೆ ದೂರವಾಣಿ ಮೂಲಕ ಮಾತನಾಡಿದ್ದು, ತಮ್ಮನ್ನು ಅನಗತ್ಯವಾಗಿ ಟಾರ್ಗೆಟ್ ಮಾಡಲಾಗುತ್ತಿದೆ. ಇದರಿಂದ ಪಕ್ಷಕ್ಕೆ ಮುಜುಗರವಾಗುವುದು ಬೇಡ ಎಂದಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ಪ್ರತಿಕ್ರಿಯಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

