AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಗೆದ್ದರೆ 5 ಗ್ಯಾರಂಟಿಗಳು ವಾಪಸ್‌: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ!

ಬಿಜೆಪಿ ಗೆದ್ದರೆ 5 ಗ್ಯಾರಂಟಿಗಳು ವಾಪಸ್‌: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ!

ಶಿವಕುಮಾರ್ ಪತ್ತಾರ್
| Edited By: |

Updated on: Nov 24, 2026 | 12:10 PM

Share

ಕನಕಗಿರಿಯಲ್ಲಿ ಸಚಿವ ಶಿವರಾಜ್ ತಂಗಡಗಿ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಬಿಜೆಪಿಗೆ ಮತ ಹಾಕಿದರೆ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ರದ್ದಾಗುತ್ತವೆ ಎಂದು ಅವರು ಎಚ್ಚರಿಸಿದ್ದಾರೆ. ₹2000 ಸಹಾಯಧನ, ಉಚಿತ ವಿದ್ಯುತ್ ಹಾಗೂ ಉಚಿತ ಬಸ್ ಸೇವೆ ಸ್ಥಗಿತಗೊಳ್ಳುವ ಬಗ್ಗೆ ತಮ್ಮ ಭಾಷಣದಲ್ಲಿ ಪುನರುಚ್ಚರಿಸಿದ್ದಾರೆ.

ಕೊಪ್ಪಳ, ನವೆಂಬರ್ 24: ಸಚಿವ ಶಿವರಾಜ್ ತಂಗಡಗಿ ಅವರು ಬಿಜೆಪಿ ಮತ್ತು ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ತಮ್ಮ ಕ್ಷೇತ್ರ ಕನಕಗಿರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ತಂಗಡಗಿ, ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಿದರೆ ರಾಜ್ಯದಲ್ಲಿ ಜಾರಿಯಲ್ಲಿರುವ ಐದು ಗ್ಯಾರಂಟಿ ಯೋಜನೆಗಳು ರದ್ದುಗೊಳ್ಳುತ್ತವೆ ಎಂದು ಎಚ್ಚರಿಸಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರಮುಖವಾಗಿ ಮೂರು ಯೋಜನೆಗಳಾದ ₹2000 ಸಹಾಯಧನ (ಗೃಹಲಕ್ಷ್ಮಿ), ಉಚಿತ ವಿದ್ಯುತ್ (ಗೃಹಜ್ಯೋತಿ) ಮತ್ತು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ (ಶಕ್ತಿ ಯೋಜನೆ) ಸ್ಥಗಿತಗೊಳ್ಳುತ್ತವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತ, ಮಹಿಳೆಯರು ಉಚಿತ ಬಸ್ ಸೇವೆ ಬಳಸಿಕೊಂಡು ತವರು ಮನೆಗಳಿಗೆ, ಸಂಬಂಧಿಕರ ಮನೆಗಳಿಗೆ ಮತ್ತು ದೇವಾಲಯಗಳಿಗೆ ಸುಲಭವಾಗಿ ಪ್ರಯಾಣಿಸುತ್ತಿದ್ದಾರೆ. ಆದರೆ, ಬಿಜೆಪಿ ಅಧಿಕಾರಕ್ಕೆ ಬಂದರೆ ಈ ಸೌಲಭ್ಯಗಳು ಕಡಿತಗೊಳ್ಳುತ್ತವೆ ಎಂದು ತಂಗಡಗಿ ಹೇಳಿದ್ದಾರೆ.

ಇದು ಸತ್ಯವಾದ ಮಾತು ಎಂದು ಪುನರುಚ್ಚರಿಸಿರುವ ಸಚಿವರು, ಮತದಾರರು ತಮ್ಮ ಆಯ್ಕೆಯ ಬಗ್ಗೆ ಎಚ್ಚರಿಕೆಯಿಂದಿರಬೇಕು ಎಂದು ಪರೋಕ್ಷವಾಗಿ ಸೂಚಿಸಿದ್ದಾರೆ. ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಶಿವಕುಮಾರ್ ಪತ್ತಾರ್
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More