ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್ ಹೇಳಿಕೆಯ ವಿಡಿಯೋ ವೈರಲ್
ಪಹಲ್ಗಾಮ್ ಉಗ್ರ ದಾಳಿಯ ನಂತರ ಭಾರತ ಪಾಕಿಸ್ತಾನ ಮಧ್ಯೆ ಉದ್ವಿಗ್ನತೆ ಹೆಚ್ಚಾಗಿದೆ. ಯುದ್ಧ ನಡೆಯುವ ಸಾಧ್ಯತೆಯ ಬಗ್ಗೆಯೂ ಚರ್ಚೆಗಳಾಗುತ್ತಿವೆ. ಯುದ್ಧ ಬೇಡ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ಬಾಂಬ್ ಕಟ್ಟಿಕೊಂಡು ಪಾಕಿಸ್ತಾನದ ವಿರುದ್ಧ ಯುದ್ಧಕ್ಕೆ ಹೋಗಲು ಸಿದ್ಧ ಎಂದಿರುವ ವಿಡಿಯೋ ವೈರಲ್ ಆಗುತ್ತಿದೆ.
ವಿಜಯನಗರ, ಮೇ 3: ‘‘ನಾವು ಭಾರತೀಯರು, ನಾವು ಹಿಂದೂಸ್ತಾನಿಗಳು. ನಮಗೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧ ಇಲ್ಲ. ಯುದ್ಧ ಮಾಡಬೇಕಾಗಿ ಬಂದರೆ ಒಬ್ಬ ಮಂತ್ರಿಯಾಗಿ ನಾನೂ ಸಿದ್ಧ. ಈ ದೇಶಕ್ಕೋಸ್ಕರ ಅಗತ್ಯಬಿದ್ದರೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವಕಾಶ ಕೊಡಲಿ. ಸೂಸೈಡ್ ಬಾಂಬ್ ಕಟ್ಟಿಕೊಂಡು ಪಾಕಿಸ್ತಾನದ ವಿರುದ್ಧ ಯುದ್ಧಕ್ಕೆ ಹೋಗುತ್ತೇನೆ. ಇದು ಅಲ್ಲಾ ಮೇಲೆ, ದೇವರ ಮೇಲೆ ಆಣೆ’’ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿರುವ ವಿಡಿಯೋ ಈಗ ವೈರಲ್ ಆಗುತ್ತಿದೆ. ವಿಡಿಯೋ ಇಲ್ಲಿದೆ ನೋಡಿ.
Latest Videos
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ಬಿಗ್ ಬಾಸ್ ಧನುಷ್ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್ಮೆಂಟ್
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!

