ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು

Updated on: Jun 18, 2026 | 5:05 PM

ಕರ್ನಾಟಕ ಎಂಎಲ್‌ಸಿ ಚುನಾವಣಾ ಮತದಾನದ ಬಳಿಕ ರಾಜಕೀಯ ಪಕ್ಷಗಳಲ್ಲಿ ವಿಶ್ವಾಸ ಮತ್ತು ಅನುಮಾನಗಳು ಮನೆ ಮಾಡಿವೆ. ಕಾಂಗ್ರೆಸ್ ಎಲ್ಲಾ ಐದೂ ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದು, ಬಿಜೆಪಿ ಮತ್ತು ಜೆಡಿಎಸ್‌ನಲ್ಲಿ ಅಡ್ಡಮತದಾನದ ನಿರೀಕ್ಷೆಯಿದೆ. ಇತ್ತ, ಜಿ.ಟಿ. ದೇವೇಗೌಡರ ಆತ್ಮಸಾಕ್ಷಿ ಮತದ ಬಗ್ಗೆ ಅವರ ಪುತ್ರ ಹರೀಶ್ ಗೌಡ ಅನುಮಾನ ವ್ಯಕ್ತಪಡಿಸಿದ್ದು, ಪಕ್ಷದ ನಿಷ್ಠೆಗೆ ಒತ್ತು ನೀಡಿದ್ದಾರೆ.

ಬೆಂಗಳೂರು, ಜೂನ್​ 18: ಪರಿಷತ್​ನ 7 ಸ್ಥಾನ ಗಳಿಗೆ ನಡೆದ ಚುನಾವಣೆ ಮುಕ್ತಾಯಗೊಂಡಿದೆ. 222 ಮತ ಚಲಾವಣೆ ಆಗುವ ಮೂಲಕ ಶೇ.100ರಷ್ಟು ಮತದಾನ ಆಗಿದೆ. ಕೆಲವೇ ಹೊತ್ತಿನಲ್ಲಿ ಮತ ಎಣಿಕೆ ಕಾರ್ಯ ಕೂಡ ಆರಂಭಗೊಳ್ಳಲಿದೆ. ಈ ಮಧ್ಯೆ ಕಾಂಗ್ರೆಸ್​ ನಾಯಕರು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಮಗೆ ಯಾವುದೇ ಅಡ್ಡಮತದಾನ ಭಯವಿಲ್ಲ. ಕಾಂಗ್ರೆಸ್​​​ನ ಐವರು ಅಭ್ಯರ್ಥಿಗಳು ಗೆದ್ದೇ ಗೆಲ್ಲುತ್ತಾರೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಐಕ್ಯತೆಯನ್ನು ಎತ್ತಿ ಹಿಡಿದು ನಾಯಕತ್ವದಲ್ಲಿ ಪಕ್ಷವು ಒಗ್ಗಟ್ಟನ್ನು ಪ್ರದರ್ಶಿಸಿದೆ. ಸಿಎಲ್‌ಪಿ ಶಾಸಕಾಂಗ ಸಭೆಗಳಲ್ಲಿ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದ್ದು, ಪಕ್ಷದಲ್ಲಿ ಯಾವುದೇ ಭಯ ಅಥವಾ ಅಡ್ಡಮತದಾನದ ಆತಂಕವಿಲ್ಲ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷವು ನಿರೀಕ್ಷೆಗಿಂತ ಹೆಚ್ಚು ಮತಗಳನ್ನು ಪಡೆಯುವ ವಿಶ್ವಾಸದಲ್ಲಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More