ಬ್ಯಾಲೆಟ್ ಪೇಪರ್ ಬಳಸಿದ್ರೂ ಮುಗ್ಗರಿಸಿದ ಕಾಂಗ್ರೆಸ್: MLC ಚುನಾವಣೆಯಲ್ಲಿ ಮೇಲುಗೈ ಸಾಧಿಸಿದ ದೋಸ್ತಿಗಳು
ತೀವ್ರ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆಯ ಪೈಕಿ ಎರಡು ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದೆ. 4ರಲ್ಲಿ ಈಗಾಗಲೇ ಎನ್ಡಿಎ (ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ) ಎರಡರಲ್ಲಿ ಗೆದ್ದು ಬೀಗಿದ್ದುಮ ಇನ್ನುಳಿದ ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇದರಿಂದ ಬ್ಯಾಲೆಟ್ ಪೇಪರ್ ಬಳಸಿದ್ರೂ ಸಹ ಆಡಳಿತಾರೂಢ ಕಾಂಗ್ರೆಸ್ಗೆ ಮುಖಭಂಗವಾಗಿದೆ. ಹೌದು.. ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳ ಪೈಕಿ ಈಗಾಗಲೇ ಬೆಂಗಳೂರು ಹಾಗೂ ಈಶಾನ್ಯ ಶಿಕ್ಷಕರ ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದ್ದು, ಎರಡರಲ್ಲೂ ಎನ್ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಬೆಂಗಳೂರು, (ಅಕ್ಟೋಬರ್ 27): ತೀವ್ರ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆಯ ಪೈಕಿ ಎರಡು ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದೆ. 4ರಲ್ಲಿ ಈಗಾಗಲೇ ಎನ್ಡಿಎ (ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ) ಎರಡರಲ್ಲಿ ಗೆದ್ದು ಬೀಗಿದ್ದುಮ ಇನ್ನುಳಿದ ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇದರಿಂದ ಬ್ಯಾಲೆಟ್ ಪೇಪರ್ ಬಳಸಿದ್ರೂ ಸಹ ಆಡಳಿತಾರೂಢ ಕಾಂಗ್ರೆಸ್ಗೆ ಮುಖಭಂಗವಾಗಿದೆ. ಹೌದು.. ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳ ಪೈಕಿ ಈಗಾಗಲೇ ಬೆಂಗಳೂರು ಹಾಗೂ ಈಶಾನ್ಯ ಶಿಕ್ಷಕರ ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದ್ದು, ಎರಡರಲ್ಲೂ ಎನ್ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಇನ್ನು ಆಗ್ನೇಯ ಪದವೀಧರರ ಕ್ಷೇತ್ರ ಮತ್ತು ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದ್ದು,ಈ ಎರಡರಲ್ಲೂ ಎನ್ಡಿಎ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಎನ್ಡಿಎ ಅಭ್ಯರ್ಥಿ ಎಂಪಿ ರಂಗನಾಥ್ ಅವರು ಕಾಂಗ್ರೆಸ್ ಪುಟ್ಟಣ್ಣ ಅವರನ್ನು ಸೋಲಿಸಿದ್ದಾರೆ. ಇನ್ನೊಂದೆಡೆ ಈಶಾನ್ಯ ಶಿಕ್ಷಕರ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಶಶಿಲ್ ನಮೋಶಿ ಅವರು ಕಾಂಗ್ರೆಸ್ನ ಶರಣಪ್ಪ ಮಟ್ಟೂರು ಅವರನ್ನು ಸೋಲಿಸಿ ಮತ್ತೊಮ್ಮೆ ಪರಿಷತ್ಗೆ ಆಯ್ಕೆಯಾಗಿದ್ದಾರೆ.
ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಲಿಂಬಿಕಾಯಿ, ಬಿಜೆಪಿ ಅಭ್ಯರ್ಥಿ ಸುಂಕನೂರ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದ್ದು, ಇಲ್ಲಿಯೂ ಬಿಜೆಪಿ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇನ್ನೂ ಅಗ್ನೇಯ ಪದವೀಧರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ ಕಣದಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿ ಕೆ.ಎಂ ಸುರೇಶ್ ಪ್ರತಿಸ್ಪರ್ಧಿಯಾಗಿದ್ದಾರೆ. ಇಲ್ಲಿಯೂ ಸಹ ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದು, ಬಹುತೇಕ ಈ ಎರಡರಲ್ಲೂ ಸಹ ಬಿಜೆಪಿ ಗೆಲ್ಲಲಿದೆ.

