ಹಾಸನ: ಪರಿಷತ್ ಚುನಾವಣೆಯಲ್ಲಿ ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣಗೆ ಗೆಲುವು ಸಿಕ್ಕಿದೆ. ಜೆಡಿಎಸ್ ಅಭ್ಯರ್ಥಿಗೆ 2,242 ಮತ, ಕಾಂಗ್ರೆಸ್ ಅಭ್ಯರ್ಥಿಗೆ 731 ಮತಗಳು, ಬಿಜೆಪಿಗೆ 354 ಮತಗಳು ಸಿಕ್ಕಿವೆ. ಹೀಗಾಗಿ 1433 ಮತಗಳ ಅಂತರದಿಂದ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣಗೆ ಜಯ ಭಾರಿಸಿದ್ದಾರೆ.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮೊಮ್ಮಗನಿಗೆ ಗೆಲುವು ಸಿಕ್ಕಿದೆ. ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣಗೆ 2,242 ಮತಗಳು, ಕಾಂಗ್ರೆಸ್ ಅಭ್ಯರ್ಥಿ ಎಂ.ಶಂಕರ್‌ಗೆ 731 ಮತಗಳು, ಬಿಜೆಪಿ ಅಭ್ಯರ್ಥಿ ಹೆಚ್.ಎಂ.ವಿಶ್ವನಾಥ್‌ಗೆ 354 ಮತಗಳು ಲಭಿಸಿವೆ. ಸೂರಜ್ ರೇವಣ್ಣ ಬೆಂಬಲಿಗರ ಸಂಭ್ರಮ ಮನೆ ಮಾಡಿದೆ.