ಸುಲಭವಾಗಿ ಗೆಲ್ಲಬೇಕಿದ್ದ ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿ ರಘು ಕೌಟಿಲ್ಯ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ನಿರೀಕ್ಷಿತ ಮತಗಳ ಕುರಿತು ಸ್ಪಷ್ಟನೆ ನೀಡಿದ ಅವರು, ತಮಗೆ 29 ಮತಗಳು ಬಂದಿದ್ದು, ಒಂದು ಮತ ಅಮಾನ್ಯವಾಗಿದೆ, ಆದರೆ ಬೇಕಾಗಿದ್ದು 28 ಮತ ಮಾತ್ರ ಎಂದರು. ಲಿಂಗರಾಜ್ ಪಾಟೀಲ್ ಅವರಿಗೆ ಕಡಿಮೆ ಮತ ಬಂದಿರುವ ಕುರಿತು ಪಕ್ಷ ಗಮನಿಸಲಿದೆ ಎಂದು ತಿಳಿಸಿದರು.
ಬೆಂಗಳೂರು, ಜೂನ್ 18: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಘು ಕೌಟಿಲ್ಯ ಜಯಗಳಿಸಿದ್ದು, ಈ ಗೆಲುವನ್ನು ಭಾರತೀಯ ಜನತಾ ಪಕ್ಷದ ವರಿಷ್ಠರು ಹಾಗೂ ಕಾರ್ಯಕರ್ತರಿಗೆ ಸಮರ್ಪಿಸಿದ್ದಾರೆ. ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟ ಬೆನ್ನಲ್ಲೆ ಟಿವಿ9 ಜೊತೆಗೆ ಮಾತನಾಡಿದ ಅವರು, ತಮ್ಮ ಗೆಲುವಿಗೆ ಪಕ್ಷದ ಹಿರಿಯ ನಾಯಕರಾದ ವಿಜಯೇಂದ್ರ, ಯಡಿಯೂರಪ್ಪ, ನಿತಿನ್ ರಬ್ಬೇನ್, ಸಂತೋಷ್ ಜಿ, ರಾಧಾಮೋಹನ್ ಮತ್ತು ಕೋರ್ ಕಮಿಟಿ ಸದಸ್ಯರು ಹಾಗೂ ತಮ್ಮನ್ನು ಬೆಂಬಲಿಸಿದ ಎಲ್ಲ ಶಾಸಕ ಬಂಧುಗಳಿಗೆ ಕೃತಜ್ಞತೆ ಸಲ್ಲಿಸಿದರು. ಸುಲಭವಾಗಿ ಗೆಲ್ಲಬೇಕಿದ್ದ ಬಿಜೆಪಿ ಅಭ್ಯರ್ಥಿಗಳು ಎಲಿಮಿನೇಷನ್ ರೌಂಡ್‌ನಲ್ಲಿ ಗೆಲ್ಲುವ ಪರಿಸ್ಥಿತಿ ಬಂದಿದ್ದ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಹೌದು, ಆದರೆ ಅದನ್ನೆಲ್ಲಾ ಈಗ ವರಿಷ್ಠರು ನೋಡುತ್ತಿದ್ದಾರೆ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

