ಪರಿಷತ್ 5 ಸ್ಥಾನ ಗೆಲ್ಲಲು ಕಾಂಗ್ರೆಸ್ ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ ಗೊತ್ತಾ?

Updated on: Jun 17, 2026 | 9:52 PM

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆ (Legislative Council Election) ರಂಗೇರಿದೆ. ಎಲ್ಲಾ ರಾಜಕೀಯ ಪಕ್ಷಗಳು ತನ್ನ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಲು ಇನ್ನಿಲ್ಲದ ಕಸರತ್ತು ನಡೆಸ್ತಿವೆ. ಅಡ್ಡಮತದಾನ ಭೀತಿ ಹಿನ್ನೆಲೆ ರೆಸಾರ್ಟ್​ ಪಾಲಿಟಿಕ್ಸ್ (Resort Politics)​ ಕೂಡ ಶುರುವಾಗಿದ್ದು, ನಾಳೆ (ಜೂನ್ 18) ನಡೆಯಲಿರುವ ವಿಧಾನ ಪರಿಷತ್​ ಚುನಾವಣೆಯಲ್ಲಿ ಐದು ಸ್ಥಾನ ಗೆಲ್ಲಲು ಕಾಂಗ್ರೆಸ್ (Congress) ಪಕ್ಷ ರಣತಂತ್ರ ಹೂಡಿದೆ.

ಬೆಂಗಳೂರು, (ಜೂನ್ 17): ಕರ್ನಾಟಕ ವಿಧಾನ ಪರಿಷತ್​​ ಚುನಾವಣೆ (Legislative Council Election) ರಂಗೇರಿದೆ. ಎಲ್ಲಾ ರಾಜಕೀಯ ಪಕ್ಷಗಳು ತನ್ನ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಲು ಇನ್ನಿಲ್ಲದ ಕಸರತ್ತು ನಡೆಸ್ತಿವೆ. ಅಡ್ಡಮತದಾನ ಭೀತಿ ಹಿನ್ನೆಲೆ ರೆಸಾರ್ಟ್​ ಪಾಲಿಟಿಕ್ಸ್ (Resort Politics)​ ಕೂಡ ಶುರುವಾಗಿದ್ದು, ನಾಳೆ (ಜೂನ್ 18) ನಡೆಯಲಿರುವ ವಿಧಾನ ಪರಿಷತ್​ ಚುನಾವಣೆಯಲ್ಲಿ ಐದು ಸ್ಥಾನ ಗೆಲ್ಲಲು ಕಾಂಗ್ರೆಸ್ (Congress) ಪಕ್ಷ ರಣತಂತ್ರ ಹೂಡಿದೆ.

ಕಾಂಗ್ರೆಸ್ ತನ್ನ ಪಾಲಿನ ನಾಲ್ಕು ಸ್ಥಾನಗಳ ಜೊತೆ ಇನ್ನೊಂದು ಹೆಚ್ಚುವರಿ ಸ್ಥಾನವನ್ನು ಗೆಲ್ಲಲು ಕಸರತ್ತು ನಡೆಸಿದ್ದು, ಇದಕ್ಕೆ ಬೇಕಾದ ಎಲ್ಲಾ ಕಾರ್ಯತಂತ್ರಗಳನ್ನು ಮಾಡಿದೆ. ಕೈ ಶಾಸಕರು ನಾಳೆ (ಜೂನ್ 18) ‌ ನೇರವಾಗಿ ರೆಸಾರ್ಟ್ನಿಂದ ವಿಧಾನಸೌಧಕ್ಕೆ ತೆರಳಿ ಮತದಾನ ಮಾಡಲಿದ್ದಾರೆ. ಇದಕ್ಕೆ ಐವರು ಅಭ್ಯರ್ಥಿಗಳಿಗೆ ಐದು ಪ್ರತ್ಯೇಕ ಬಸ್ ವ್ಯವಸ್ಥೆ ಮಾಡಲಾಗಿದೆ. ಇನ್ನು ಯಾವ ಅಭ್ಯರ್ಥಿ ಪರ ಯಾರು ಮತ ಚಲಾವಣೆ ಮಾಡಬೇಕು ಎಂದು ಶಾಸಕರ ವರ್ಗೀಕರಣ ಸಹ ಮಾಡಲಾಗಿದ್ದು, ವರ್ಗೀಕರಣದ ಪ್ರಕಾರವೇ ವಿಧಾನಸೌಧಕ್ಕೆ ಪ್ರತ್ಯೇಕ ಬಸ್ ನಲ್ಲಿ ತೆರಳಲು ಸೂಚನೆ ನೀಡಲಾಗಿದೆ. ಐವರು ಅಭ್ಯರ್ಥಿಗಳಲ್ಲಿ ಮೂರು ಅಭ್ಯರ್ಥಿಗಳಿಗೆ 28 ಮತಗಳು, ಇಬ್ಬರು ಅಭ್ಯರ್ಥಿಗಳಿಗೆ 29 ಮತ ಹಾಕಲು ಸದ್ಯಕ್ಕೆ ನಿರ್ಧರಿಸಲಾಗಿದೆ.ಯಾವುದೇ ಅಭ್ಯರ್ಥಿ ಸೋತರೆ, ಅಡ್ಡ ಮತದಾನ ಮಾಡಿದರೆ ಎಂದು ಸುಲಭವಾಗಿ ಪತ್ತೆ ಮಾಡಲು ಈ ವ್ಯವಸ್ಥೆ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More