ಪಶ್ಚಿಮ ಪದವೀಧರ ಕ್ಷೇತ್ರ ಮತದಾನದ ವೇಳೆ ರಂಪಾಟ: ಪಕ್ಷದ ಶಾಲು ಹಾಕಿ ಬಂದಿದ್ದಕ್ಕೆ ಕೈ ಕಾರ್ಯಕರ್ತರ ಭಾರಿ ಆಕ್ರೋಶ

Edited By:

Updated on: Oct 23, 2026 | 1:06 PM

ಪಶ್ಚಿಮ ಪದವೀಧರ ಕ್ಷೇತ್ರದ ಎಂಎಲ್‌ಸಿ ಚುನಾವಣೆ ವೇಳೆ ಗದಗನ ಮತಗಟ್ಟೆಯಲ್ಲಿ ವಿವಾದ ಭುಗಿಲೆದ್ದಿದೆ. ಬಿಜೆಪಿ ಕಾರ್ಯಕರ್ತರು ಪಕ್ಷದ ಶಾಲು ಧರಿಸಿ ಬಂದಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪೊಲೀಸರೊಂದಿಗೆ ವಾಗ್ವಾದ ನಡೆದಿದ್ದು, ಪಕ್ಷದ ಚಿಹ್ನೆ ಅಥವಾ ಘೋಷಣೆಗಳನ್ನು ಚುನಾವಣಾ ಕೇಂದ್ರಗಳಲ್ಲಿ ನಿಷಿದ್ಧವಾದರೂ ಬಿಜೆಪಿ ಕಾರ್ಯಕರ್ತರು ನಿಯಮ ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಗದಗ, ಅ.23: ಕರ್ನಾಟಕ ವಿಧಾನ ಪರಿಷತ್‌ನ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಗದಗ ಜಿಲ್ಲೆಯಲ್ಲಿ ರಾಜಕೀಯ ಪಕ್ಷಗಳ ನಡುವೆ ವಾಗ್ವಾದ ನಡೆದಿದೆ. ಗದಗ ನಗರದ ಮುನ್ಸಿಪಲ್ ಕಾಲೇಜಿನಲ್ಲಿರುವ ಮತಗಟ್ಟೆ ಕೇಂದ್ರದಲ್ಲಿ ಈ ಘಟನೆ ವರದಿಯಾಗಿದೆ. ಬಿಜೆಪಿ ಕಾರ್ಯಕರ್ತರು ತಮ್ಮ ಪಕ್ಷದ ಶಾಲುಗಳನ್ನು ಧರಿಸಿ ಮತಗಟ್ಟೆಗೆ ಪ್ರವೇಶಿಸಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ. ಮತದಾನ ಕೇಂದ್ರಗಳ ಒಳಗೆ ಯಾವುದೇ ರಾಜಕೀಯ ಪಕ್ಷಗಳ ಚಿಹ್ನೆ ಅಥವಾ ಪ್ರಚಾರ ಸಾಮಗ್ರಿಗಳನ್ನು ಧರಿಸುವುದನ್ನು ಚುನಾವಣಾ ಆಯೋಗವು ನಿಷೇಧಿಸಿದೆ. ಆದರೆ, ಬಿಜೆಪಿ ಕಾರ್ಯಕರ್ತರು ಈ ನಿಯಮವನ್ನು ಉಲ್ಲಂಘಿಸಿ ಪಕ್ಷದ ಶಾಲುಗಳನ್ನು ಹಾಕಿಕೊಂಡು ಬಂದಿದ್ದಾರೆಂದು ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ. ಈ ವಿಚಾರವಾಗಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರ ನಡುವೆ ತೀವ್ರ ವಾಗ್ವಾದ ನಡೆದಿದೆ. ಘಟನೆಯ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಪಕ್ಷದ ಪರ ಘೋಷಣೆಗಳನ್ನು ಕೂಗಿದ್ದಾರೆ ಎನ್ನಲಾಗಿದ್ದು, ಇದು ಪರಿಸ್ಥಿತಿಯನ್ನು ಮತ್ತಷ್ಟು ಉದ್ವಿಗ್ನಗೊಳಿಸಿದೆ. ಚುನಾವಣಾ ಸಂದರ್ಭದಲ್ಲಿ ಇಂತಹ ಪ್ರಚಾರ ಚಟುವಟಿಕೆಗಳು ಮತದಾರರ ಮೇಲೆ ಪ್ರಭಾವ ಬೀರಬಹುದು ಎಂಬ ಆತಂಕವನ್ನು ಕಾಂಗ್ರೆಸ್ ವ್ಯಕ್ತಪಡಿಸಿದೆ. ಚುನಾವಣಾ ನಿಯಮಗಳನ್ನು ಪಾಲಿಸಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More