ಕ್ರೋಧಿನಾಮ ಸಂವತ್ಸರ ನಂತರದ ದಿನಗಳು ಹೇಗಿರಲಿವೆ? ಕೋಡಿ ಶ್ರೀಗಳು ನುಡಿದರು ಆತಂಕಕಾರಿ ಭವಿಷ್ಯ
ಕರ್ನಾಟಕದಲ್ಲಿ ನಿರಂತರ ಮಳೆ, ಗಾಳಿ ಮತ್ತು ಉಕ್ಕಿ ಹರಿಯುತ್ತಿರುವ ನದಿಯಿಂದ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಕರ್ನಾಟಕದಲ್ಲಿ ಸೃಷ್ಟಿಯಾಗಿರುವ ಜಲ ಕಂಟಕದ ಬಗ್ಗೆ ಕೋಡಿಮಠದ ಡಾ. ಶ್ರೀ ಶಿವಾನಂದ ಶಿವಯೋಗಿರಾಜೇಂದ್ರ ಸ್ವಾಮೀಜಿ ಅವರು ವರ್ಷದ ಆರಂಭದಲ್ಲೇ ನುಡಿದಿದ್ದ ಭವಿಷ್ಯ ನಿಜವಾಗಿದೆ. ಇದೀಗ ಬರುವ ದಿನಗಳ ಬಗ್ಗೆ ಭವಿಷ್ಯ ನುಡಿದಿದ್ದಾರೆ.
ಕರ್ನಾಟಕದಲ್ಲಿ ನಿರಂತರ ಮಳೆ (Rain), ಗಾಳಿ ಮತ್ತು ಉಕ್ಕಿ ಹರಿಯುತ್ತಿರುವ ನದಿಯಿಂದ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಚಿಕ್ಕಮಗಳೂರು, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಿಂದ ಗುಡ್ಡ ಕುಸಿದು ಸಾಕಷ್ಟು ಹಾನಿಯಾಗಿವೆ. ಕೆಲ ರಸ್ತೆ ಮತ್ತು ರೈಲು ಸಂಪರ್ಕ ಬಂದ್ ಆಗಿವೆ. ಉತ್ತರ ಕರ್ನಾಟಕದ ಬೆಳಗಾವಿ (Belagavi) ಜಿಲ್ಲೆಯಲ್ಲಿನ ಸಪ್ತ ನದಿಗಳು (River) ತುಂಬಿ ಹರಿಯುವುತ್ತಿರುವುದರಿಂದ ಕೆಲ ಗ್ರಾಮಗಳಿಗೆ ನೀರು ನುಗ್ಗಿದೆ. ಹಾಗೆ ಬಾಗಲಕೋಟೆ ಜಿಲ್ಲೆಯಲ್ಲೂ ಪ್ರವಾಹ ಪರಿಸ್ಥಿತಿ ಉದ್ಭವಿಸಿದೆ. ಇದರಿಂದ ಜನರು ಹೈರಾಣಾಗಿದ್ದಾರೆ. ಆರೈಕೆ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಸೃಷ್ಟಿಯಾಗಿರುವ ಜಲ ಕಂಟಕದ ಬಗ್ಗೆ ಕೋಡಿಮಠದ ಡಾ. ಶ್ರೀ ಶಿವಾನಂದ ಶಿವಯೋಗಿರಾಜೇಂದ್ರ ಸ್ವಾಮೀಜಿ (Kodi Mutt Swamiji) ಅವರು ವರ್ಷದ ಆರಂಭದಲ್ಲೇ ನುಡಿದಿದ್ದ ಭವಿಷ್ಯ ನಿಜವಾಗಿದೆ.
ಭವಿಷ್ಯದ ದಿನಗಳು ಶುಭವಿಲ್ಲ
ಇದೀಗ ಕ್ರೋಡಿ ಶ್ರೀಗಳು ಬರುವ ದಿನಗಳ ಭವಿಷ್ಯ ನುಡಿದಿದ್ದು, ರೋಗಗಳು ಜಾಸ್ತಿಯಾಗುತ್ತಿದೆ ಜನರು ಆಯಸ್ಸು ಕಳೆದುಕೊಳ್ಳುತ್ತಿದ್ದಾರೆ. ಮಾನಸಿಕ ಸ್ಥೈರ್ಯ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಬರುವ ದಿನಗಳ ಶುಭವಿಲ್ಲ. ಒಳ್ಳೆಯ ದಿನಗಳು ಇವೆ, ಆದರೆ, ಕೆಟ್ಟ ದಿನಗಳೇ ಜಾಸ್ತಿ ಇವೆ.
ಇದನ್ನೂ ಓದಿ: ರಾಜ್ಯ ರಾಜಕೀಯದ ಬಗ್ಗೆ ಕೋಡಿಮಠ ಶ್ರೀ ಮಾರ್ಮಿಕ ಮಾತು, ವಿಡಿಯೋ ನೋಡಿ
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ