ಕರ್ನಾಟಕದ ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಎದುರಾಯ್ತು ಗ್ಯಾಸ್ ಸಮಸ್ಯೆ
ಅಮೆರಿಕ –ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಕಚ್ಚಾ ತೈಲದ ಬೆಲೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರಿ ಏರಿಕೆ ಕಂಡಿದ್ದರಿಂದ, ಭಾರತದಲ್ಲಿ ವಾಣಿಜ್ಯ ಬಳಕೆಯ ಅಡುಗೆ ಅನಿಲ ಪೂರೈಕೆ ಗಣನೀಯವಾಗಿ ಇಳಿಕೆ ಕಂಡಿದೆ. ದೇಶದ ಹಲವು ನಗರಗಳಲ್ಲಿ ಎಲ್‍ಪಿಜಿ ಸಿಲಿಂಡರ್‌ಗಳ (LPG cylinders) ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಬೇಡಿಕೆ ಹೆಚ್ಚುತ್ತಿರುವುದರ ಜತೆಗೆ ವಿತರಣೆಯಲ್ಲಿ ತಾತ್ಕಾಲಿಕ ಅಡಚಣೆ ಎದುರಾಗುತ್ತಿದೆ. ಕೇವಲ ಹೋಟೆಲ್ ಉದ್ಯಮಕ್ಕೆ ಮಾತ್ರವಲ್ಲ ಕರ್ನಾಟಕದ ಮುಜುರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಸಹ ಗ್ಯಾಸ್ ಸಿಲಿಂಡರ್ ಸಮಸ್ಯೆ ಎದುರಾಗಿದೆ.
ಬೆಂಗಳೂರು, (ಮಾರ್ಚ್ 11): ಅಮೆರಿಕ –ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಕಚ್ಚಾ ತೈಲದ ಬೆಲೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರಿ ಏರಿಕೆ ಕಂಡಿದ್ದರಿಂದ, ಭಾರತದಲ್ಲಿ ವಾಣಿಜ್ಯ ಬಳಕೆಯ ಅಡುಗೆ ಅನಿಲ ಪೂರೈಕೆ ಗಣನೀಯವಾಗಿ ಇಳಿಕೆ ಕಂಡಿದೆ. ದೇಶದ ಹಲವು ನಗರಗಳಲ್ಲಿ ಎಲ್‍ಪಿಜಿ ಸಿಲಿಂಡರ್‌ಗಳ (LPG cylinders) ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಬೇಡಿಕೆ ಹೆಚ್ಚುತ್ತಿರುವುದರ ಜತೆಗೆ ವಿತರಣೆಯಲ್ಲಿ ತಾತ್ಕಾಲಿಕ ಅಡಚಣೆ ಎದುರಾಗುತ್ತಿದೆ. ಕೇವಲ ಹೋಟೆಲ್ ಉದ್ಯಮಕ್ಕೆ ಮಾತ್ರವಲ್ಲ ಕರ್ನಾಟಕದ ಮುಜುರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಸಹ ಗ್ಯಾಸ್ ಸಿಲಿಂಡರ್ ಸಮಸ್ಯೆ ಎದುರಾಗಿದೆ.
ಈ ಬಗ್ಗೆ ಖುದ್ದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಅವರು ವಿಧಾನಸೌಧದಲ್ಲಿ ಇಂದು (ಮಾರ್ಚ್ 11) ಮಾತನಾಡಿದ್ದು, ರಾಜ್ಯದ 15 ಪ್ರಮುಖ ಮುಜರಾಯಿ ದೇವಸ್ಥಾನಗಳಲ್ಲಿ ಸ್ವಲ್ಪ ಸಮಸ್ಯೆಯಾಗಿದೆ. ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯದ ಬಗ್ಗೆ ಸದನದಲ್ಲಿ ಚರ್ಚೆ ಆಯ್ತು. ಪ್ರಸಾದ ವಿನಿಯೋಗಕ್ಕೆ ಉಂಟಾಗುತ್ತಿರುವ ಸಮಸ್ಯೆ ಚರ್ಚೆ ಮಾಡಿದ್ವಿ. ತೊಂದರೆ ಆಗದಂತೆ ನೋಡಿಕೊಳ್ಳಲು ಆಡಳಿತ ಮಂಡಳಿಗೆ ತಿಳಿಸಿದ್ದೇವೆ. ದೇಗುಲಕ್ಕೆ ಬಂದು ಪ್ರಸಾದ ಸ್ವೀಕರಿಸಿದರೆ ಮಾತ್ರ ಭಕ್ತರಿಗೆ ಸಮಾಧಾನ. ಹೀಗಾಗಿ ಕಡಿಮೆ ಇಂಧನ ಬಳಸಿ ಪ್ರಸಾದ ತಯಾರಿಕೆ ಬಗ್ಗೆ ನಿರ್ಧಾರ ಮಾಡಿಲ್ಲ. ಪರಿಸ್ಥಿತಿ ನೋಡಿ ಮುಂದೆ ಚರ್ಚೆ ಮಾಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

