ಅಪಾರ್ಟ್​ಮೆಂಟ್ ನಿರ್ವಹಣೆಗೆ ಬರಲಿದೆ ಹೊಸ ಕಾನೂನು: ನಿವಾಸಿಗಳ ಜತೆ ಸಮಾಲೋಚನೆ ನಡೆಸಲಿರುವ ಸಿಎಂ ಡಿಕೆ ಶಿವಕುಮಾರ್

Updated on: Jul 14, 2026 | 11:51 AM

ಅಪಾರ್ಟ್​ಮೆಂಟ್ ನಿರ್ವಹಣೆ ಮತ್ತು ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಹೊಸ ಕಾನೂನು ಜಾರಿಗೆ ತರಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜುಲೈ 17ರಂದು ಬೆಂಗಳೂರಿನಲ್ಲಿ ಅಪಾರ್ಟ್​ಮೆಂಟ್ ನಿವಾಸಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಲಿದ್ದಾರೆ. ನಿವಾಸಿಗಳು ತಮ್ಮ ಸಲಹೆ, ಅಭಿಪ್ರಾಯಗಳನ್ನು ನೀಡಲು ಆಹ್ವಾನಿಸಲಾಗಿದೆ.

ಬೆಂಗಳೂರು, ಜುಲೈ 14: ಅಪಾರ್ಟ್​ಮೆಂಟ್ ನಿರ್ವಹಣೆ ಮತ್ತು ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಹೊಸ, ಸುಧಾರಿತ ಕಾನೂನನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಬೆಂಗಳೂರಿನ ಅಪಾರ್ಟ್​ಮೆಂಟ್ ಮಾಲೀಕರು ಹಲವು ವರ್ಷಗಳಿಂದ ಈ ಕುರಿತು ಒತ್ತಾಯಿಸುತ್ತಿದ್ದರು. ಅವರ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು, ಕರ್ನಾಟಕ ಸರ್ಕಾರವು ಹೊಸ ಕಾನೂನನ್ನು ರೂಪಿಸುತ್ತಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಈ ಹೊಸ ಕಾನೂನನ್ನು ವಿಧಾನ ಮಂಡಲದಲ್ಲಿ ಮಂಡಿಸುವ ಮೊದಲು, ಎಲ್ಲಾ ಪಾಲುದಾರರ ಅಭಿಪ್ರಾಯಗಳನ್ನು ಸಂಗ್ರಹಿಸಲು ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆಯಂತೆ ರೂಪಿಸಲಾದ ಈ ಕಾನೂನಿನ ಬಗ್ಗೆ ಚರ್ಚಿಸಲು, ಜುಲೈ 17ರ ಬುಧವಾರ ಬೆಳಗ್ಗೆ 11:00 ಗಂಟೆಗೆ ಬೆಂಗಳೂರಿನ ಜವಾಹರ ಲಾಲ್ ನೆಹರು ತಾರಾಲಯದ ಸಭಾಭವನದಲ್ಲಿ ಸಭೆ ನಡೆಯಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಅಪಾರ್ಟ್​ಮೆಂಟ್ ನಿವಾಸಿಗಳು, ಮಾಲೀಕರು ಮತ್ತು ಸಂಬಂಧಿತ ಪಾಲುದಾರರು ಈ ಸಭೆಯಲ್ಲಿ ಭಾಗವಹಿಸಿ ತಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳನ್ನು ಹಂಚಿಕೊಳ್ಳುವಂತೆ ಸರ್ಕಾರ ಮನವಿ ಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More