ಡಿಕೆ ಶಿವಕುಮಾರ್ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ

Updated on: May 30, 2026 | 7:57 PM

ಬೆಂಗಳೂರಿನ ವಿಧಾನಸೌಧದಲ್ಲಿ ಇಂದು (ಮೇ 30) ನಡೆದ ಸಿಎಲ್‌ಪಿ ಸಭೆಯಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಅವರನ್ನು ಆಯ್ಕೆ ಮಾಡಲಾಗಿದ್ದು, ಇದಾದ ಬಳಿಕ ಡಿ.ಕೆ.ಶಿವಕುಮಾರ್‌ ಅವರು ಕಾಂಗ್ರೆಸ್‌ ನಾಯಕರೊಂದಿಗೆ ಲೋಕಭವನಕ್ಕೆ ತೆರಳಿ, ಸರ್ಕಾರ ರಚಿಸಲು ರಾಜ್ಯಪಾಲರ ಬಳಿ ಹಕ್ಕು ಮಂಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಸರ್ಕಾರ ರಚನೆಗೆ ಗವರ್ನರ್‌ ಆಹ್ವಾನಿಸಿದ್ದಾರೆ. ಈ ಬಗ್ಗೆ ಡಿ.ಕೆ.ಶಿವಕುಮಾರ್‌ ಅವರಿಗೆ ರಾಜ್ಯಪಾಲರಿಂದ ಅಧಿಕೃತ ಪತ್ರ ಕಳುಹಿಸಲಾಗಿದೆ. ಲೋಕಭವನದಲ್ಲಿ ಜೂನ್‌ 3ರಂದು ಸಂಜೆ 4.05 ಗಂಟೆಗೆ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ, ತಾವು ತಮ್ಮ ತಂಡದೊಂದಿಗೆ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಬೇಕು ಎಂದು ಪತ್ರದಲ್ಲಿ ರಾಜ್ಯಪಾಲರು ಕೋರಿದ್ದಾರೆ.

ಬೆಂಗಳೂರು, (ಮೇ 30):  ವಿಧಾನಸೌಧದಲ್ಲಿ ಇಂದು (ಮೇ 30) ನಡೆದ ಸಿಎಲ್‌ಪಿ ಸಭೆಯಲ್ಲಿ (CLP Meeing) ಡಿ.ಕೆ.ಶಿವಕುಮಾರ್‌ (DK Shivakumar) ಅವರನ್ನು  ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ  ಆಯ್ಕೆ ಮಾಡಲಾಗಿದ್ದು, ಇದಾದ ಬಳಿಕ ಡಿ.ಕೆ.ಶಿವಕುಮಾರ್‌ ಅವರು ಕಾಂಗ್ರೆಸ್‌ ನಾಯಕರೊಂದಿಗೆ ಲೋಕಭವನಕ್ಕೆ ತೆರಳಿ, ಸರ್ಕಾರ ರಚಿಸಲು ರಾಜ್ಯಪಾಲರ ಬಳಿ ಹಕ್ಕು ಮಂಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಸರ್ಕಾರ ರಚನೆಗೆ ಗವರ್ನರ್‌ ಆಹ್ವಾನಿಸಿದ್ದಾರೆ. ಈ ಬಗ್ಗೆ ಡಿ.ಕೆ.ಶಿವಕುಮಾರ್‌ ಅವರಿಗೆ ರಾಜ್ಯಪಾಲರಿಂದ ಅಧಿಕೃತ ಪತ್ರ ಕಳುಹಿಸಲಾಗಿದೆ. ಲೋಕಭವನದಲ್ಲಿ ಜೂನ್‌ 3ರಂದು ಸಂಜೆ 4.05 ಗಂಟೆಗೆ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ, ತಾವು ತಮ್ಮ ತಂಡದೊಂದಿಗೆ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಬೇಕು ಎಂದು ಪತ್ರದಲ್ಲಿ ರಾಜ್ಯಪಾಲರು ಕೋರಿದ್ದಾರೆ.

ಈ ಮೊದಲು ಸಂಜೆ 5ಕ್ಕೆ ಅಷ್ಟಕ್ಕೆ ಇಷ್ಟಕ್ಕೆ ಅಂತೆ ಕಂತೆ ಸುದ್ದಿ ಕೇಳಿಬರುತ್ತಿದ್ದವು. ಆದರೆ, ಇದೀಗ ರಾಜ್ಯಪಾಲರ ಅಧಿಕೃತ ಪತ್ರದ ಪ್ರಕಾರ ಜೂನ್ 3ರ ಸಂಜೆ 4.5ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ಡಿಕೆ ಶಿವಕುಮಾರ್ ಅವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Follow Us