2nd PUC Result: ಮಂಗಳೂರಿನ ತುಳಸಿ ಪೈ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 2ನೇ ರ‍್ಯಾಂಕ್
ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ತುಮಕೂರಿನ ವಿದ್ಯಾರ್ಥಿನಿ ಜ್ಞಾನವಿ 600ಕ್ಕೆ 597 ಅಂಕ ಪಡೆಯುವ ಮೂಲಕ ಫಸ್ಟ್ ರ್ಯಾಂಕ್ ಬಂದಿದ್ದಾರೆ. ದ್ವಿತೀಯ ಸ್ಥಾನವನ್ನು ಮಂಗಳೂರಿನ ತುಳಸಿ ಪೈ ಅವರು ಅಲಂಕರಿಸಿದ್ದಾರೆ. 600ಕ್ಕೆ 596 ಅಂಕಗಳನ್ನು ಪಡೆದಿದ್ದಾರೆ.
ಬೆಂಗಳೂರು, ಏಪ್ರಿಲ್ 10: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ತುಮಕೂರಿನ ವಿದ್ಯಾರ್ಥಿನಿ ಜ್ಞಾನವಿ 600ಕ್ಕೆ 597 ಅಂಕ ಪಡೆಯುವ ಮೂಲಕ ಫಸ್ಟ್ ರ್ಯಾಂಕ್ ಬಂದಿದ್ದಾರೆ. ದ್ವಿತೀಯ ಸ್ಥಾನವನ್ನು ಮಂಗಳೂರಿನ ತುಳಸಿ ಪೈ ಅವರು ಅಲಂಕರಿಸಿದ್ದಾರೆ. 600ಕ್ಕೆ 596 ಅಂಕಗಳನ್ನು ಪಡೆದಿದ್ದಾರೆ. ನಾಲ್ಕನೇ ಸ್ಥಾನದಲ್ಲಿ ಸಮೃದ್ದಿ ಇದ್ದಾರೆ. ಸಮೃದ್ಧಿ ಅವರು 594 ಅಂಕಗಳನ್ನು ಪಡೆದಿದ್ದಾರೆ.
ದ್ವಿತೀಯ ಪಿಯುಸಿ ಫಲಿತಾಂಶ
ರಾಜ್ಯದಾದ್ಯಂತ ಮಾ.1ರಿಂದ ಮಾರ್ಚ್ 22ರವರೆಗೆ 1,124 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಪ್ರಸಕ್ತ ವರ್ಷ 6.9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 3.3 ಲಕ್ಷ ವಿದ್ಯಾರ್ಥಿಗಳು, 3.6 ಲಕ್ಷ ವಿದ್ಯಾರ್ಥಿನಿಯರು ಹಾಜರಾಗಿದ್ದರು. ಮೂರು ಭಾಗಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸಲಾಗಿತ್ತು.
2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೇ, ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ದ್ವೀತಿಯ ಪಿಯುಸಿ ಫಲಿತಾಂಶದಲ್ಲಿ ಶೇ97ರಷ್ಟು ತೇರ್ಗಡೆಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಶೇ.96.80ರಷ್ಟು ಫಲಿತಾಂಶದೊಂದಿಗೆ ಉಡುಪಿ ಜಿಲ್ಲೆಗೆ ಎರಡನೇ ಸ್ಥಾನದಲ್ಲಿದ್ದರೇ, ಶೇ.94.89ರಷ್ಟು ಫಲಿತಾಂಶದೊಂದಿಗೆ ವಿಜಯಪುರ ಜಿಲ್ಲೆಗೆ 3ನೇ ಸ್ಥಾನದಲ್ಲಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ