ಬೆಂಗಳೂರು: ಚರ್ಚ್ ಸ್ಟ್ರೀಟ್ನ ಕಟ್ಟಡವೊಂದರಲ್ಲಿ ಬೆಂಕಿ ಅವಘಡ
ಬೆಂಗಳೂರಿನ ಚರ್ಚ್ ಸ್ಟ್ರೀಟ್ನ(Church Street) ಕಟ್ಟಡವೊಂದರಲ್ಲಿ ಸಾಯಂಕಾಲ 7.30 ರ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯಿಂದ ಕಟ್ಟಡದಲ್ಲಿ ಹೊಗೆ ಆವರಿಸಿಕೊಂಡಿದೆ. ದಟ್ಟ ಹೊಗೆಯಿಂದ ಜನರಲ್ಲಿ ಆತಂಕ ಮೂಡಿದೆ.
ಬೆಂಗಳೂರು, ಮೇ.05: ಬೆಂಗಳೂರಿನ ಚರ್ಚ್ ಸ್ಟ್ರೀಟ್ನ(Church Street) ಕಟ್ಟಡವೊಂದರಲ್ಲಿ ಸಾಯಂಕಾಲ 7.30 ರ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯಿಂದ ಕಟ್ಟಡದಲ್ಲಿ ಹೊಗೆ ಆವರಿಸಿಕೊಂಡಿದೆ. ದಟ್ಟ ಹೊಗೆಯಿಂದ ಜನರಲ್ಲಿ ಆತಂಕ ಮೂಡಿದ್ದು, ಸ್ಥಳಕ್ಕೆ 3 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಇನ್ನು ಇತ್ತ ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ನೆಲಮಂಗಲ ತಾಲೂಕಿನ ಟಿ.ಬೇಗೂರು ಸಮೀಪದ ಅಗಸರಹಳ್ಳಿ ಗ್ರಾಮದಲ್ಲಿ ವಿದ್ಯುತ್ ಏರಿಳಿತದಿಂದಾಗಿ 7ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮನೆಯಲ್ಲಿನ ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಭಸ್ಮವಾಗಿದ್ದು, ಸ್ಥಳಕ್ಕೆ ಬೆಸ್ಕಾಂ ಸಿಬ್ಬಂದಿ ಆಗಮಿಸಿದ್ದಾರೆ. ಮಹೇಶ್ ಎಂಬುವವರು ಸೇರಿದಂತೆ ಒಟ್ಟು 7 ಜನರ ಮನೆಗಳಲ್ಲಿ ಬೆಂಕಿ ಕಾಣಿಸಿಕೊಂಡು ಮನೆಯಲ್ಲಿನ ವಸ್ತುಗಳು ಸುಟ್ಟು ಭಸ್ಮವಾಗಿದೆ. ಈ ಕುರಿತು ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ

