ದಕ್ಷಿಣ ಕನ್ನಡ: ದೇವರ ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನ ಜಖಂಗೊಳಿಸಿದ ಭಕ್ತರು! ಇಲ್ಲಿದೆ ವಿಡಿಯೋ

Edited By: ಕಿರಣ್ ಹನುಮಂತ್​ ಮಾದಾರ್

Updated on: Apr 04, 2024 | 8:15 AM

ದಕ್ಷಿಣ ಕನ್ನಡ(Dakshina kannada) ಜಿಲ್ಲೆಯ ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ದೇವರ ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನು ಭಕ್ತರು ಜಖಂ ಗೊಳಿಸಿದ ಘಟನೆ ನಡೆದಿದೆ. ವಾಹನಗಳನ್ನು ಬದಿಗೆ ದೂಡಿ ಹಾಕುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,  ಘಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಾರೀ ಆಕ್ರೋಶ ವ್ಯಕ್ತವಾಗಿದೆ.

ದಕ್ಷಿಣ ಕನ್ನಡ, ಏ.04: ದೇವರ ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನು ಭಕ್ತರು ಜಖಂ ಗೊಳಿಸಿದ ಘಟನೆ ಇತ್ತೀಚೆಗೆ ನಡೆದ ದಕ್ಷಿಣ ಕನ್ನಡ(Dakshina kannada) ಜಿಲ್ಲೆಯ ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ನಡೆದಿದೆ. ರಥ ಹೋಗುವ ದಾರಿಯಲ್ಲಿ ವಾಹನಗಳನ್ನ ಪಾರ್ಕ್  ಮಾಡಲಾಗಿತ್ತು. ಈ ವೇಳೆ ರಥ ಹೋಗಲು ದಾರಿ ಮಾಡುವ ಸಲುವಾಗಿ ಭಕ್ತರು, ಪಾರ್ಕ್ ಮಾಡಿದ ಕಾರು, ರಿಕ್ಷಾ , ಬೈಕ್‌ಗಳನ್ನು ಬದಿಗೆ ದೂಡಿ ಹಾಕಿದ್ದಾರೆ. ವಾಹನಗಳನ್ನು ಬದಿಗೆ ದೂಡಿ ಹಾಕುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,  ಘಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಾರೀ ಆಕ್ರೋಶ ವ್ಯಕ್ತವಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More