HD Kumaraswamy Nomination: ಮಂಡ್ಯದಲ್ಲಿ ಹೆಚ್​ಡಿ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ನೇರ ಪ್ರಸಾರ

|

Updated on: Apr 04, 2024 | 10:56 AM

ನಾಮಪತ್ರ ಸಲ್ಲಿಸಲು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಬಂದಾಗ ಮಂಡ್ಯ ಡಿಸಿ ಕಚೇರಿಗೆ ನೂರು ಮೀಟರ್ ದೂರದಲ್ಲೇ ಅವರ ಕಾರಿಗೆ ಪೊಲೀಸರು ತಡೆಯೊಡ್ಡಿದರು. ಈ ವೇಳೆ ಪೊಲೀಸರೊಂದಿಗೆ ಹೆಚ್ಡಿಕೆ, ಜೆಡಿಎಸ್ ನಾಯಕರ ವಾಗ್ವಾದ ನಡೆಯಿತು. ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ಬಳಿಕ ನಡೆದುಕೊಂಡೇ ಡಿಸಿ ಕಚೇರಿ ಬಳಿ ಆಗಮಿಸಿದರು.

ಮಂಡ್ಯ, ಏಪ್ರಿಲ್ 4: ಲೋಕಸಭೆ ಚುನಾವಣೆಗೆ ಬಿಜೆಪಿ ಜೆಡಿಎಸ್ ಮೈತ್ರಿ (BJP JDS Alliance) ಅಭ್ಯರ್ಥಿಯಾಗಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರು ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದು, ಇಂದು ನಾಮಪತ್ರ ಸಲ್ಲಿಸುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷದ ಒಕ್ಕಲಿಗ ಅಸ್ತ್ರಕ್ಕೆ ದಳಪತಿಗಳು ಪ್ರತ್ಯಸ್ತ್ರ ಸಿದ್ಧಪಡಿಸಿದ್ದು, ಮಂಡ್ಯದಲ್ಲಿ ದೋಸ್ತಿಗಳ ಬೃಹತ್ ಶಕ್ತಿ ಪ್ರದರ್ಶನ ಮಾಡುತ್ತಿದ್ದಾರೆ. ಒಂದೇ ವೇದಿಯಲ್ಲಿ ಒಕ್ಕಲಿಗ, ಲಿಂಗಾಯಿತ, ಮೈಸೂರು ಅರಸರ ಸಮಾಗಮವಾಗುತ್ತಿದೆ. ಮಂಡ್ಯ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ನಾಮಪತ್ರ  ಸಲ್ಲಿಕೆಗೂ ಮುನ್ನ ಮಂಡ್ಯ ನಗರದ ವಿವಿಧ ದೇಗುಲಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ನಂತರ ಅಂಬೇಡ್ಕರ್, ಕಾವೇರಿ, ವಿಶ್ವೇಶ್ವರಯ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ಮಂಡ್ಯ ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ. ನಾಮಪತ್ರ ಸಲ್ಲಿಕೆ ನಂತರ ಜೆಡಿಎಸ್‌-ಬಿಜೆಪಿ ಮೈತ್ರಿ ಸಮಾವೇಶ ನಡೆಯುತ್ತಿದೆ. ಮಂಡ್ಯ ವಿವಿ ಆವರಣದಲ್ಲಿ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಹಲವು ಸಮುದಾಯದ ಮುಖಂಡರು ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ‘ಗ್ಯಾರಂಟಿ’ಗೇ ಇಲ್ಲ ಗ್ಯಾರಂಟಿ! ಬಿಜೆಪಿಗೆ ಮತ ನೀಡಿದರೆ ಉಚಿತ ಬಸ್​ ನಿಲ್ಲಿಸುತ್ತಾರೆಂದ ಪ್ರದೀಪ್ ಈಶ್ವರ್

ಗೋವಾ ಸಿಎಂ ಪ್ರಮೋದ್ ಸಾವಂತ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮೈಸೂರು ಅಭ್ಯರ್ಥಿ ಯದುವೀರ್, ನಿಖಿಲ್ ಕುಮಾರಸ್ವಾಮಿ, ಜಿಲ್ಲೆಯ ಮಾಜಿ ಸಚಿವರು, ಶಾಸಕರು, ಸ್ಥಳೀಯ ಮುಖಂಡರು ಸಮಾವೇಶದಲ್ಲಿ ಭಾಗಿಯಾಗುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Apr 04, 2024 10:51 AM