PM Modi Mangaluru Roadshow: ಮಂಗಳೂರಿನಲ್ಲಿ ರೋಡ್​ಶೋ ಮೂಲಕ ಪ್ರಧಾನಿ ಮೋದಿ ಚುನಾವಣಾ ಪ್ರಚಾರ

Edited By:

Updated on: Apr 14, 2024 | 10:10 PM

ರಾಜ್ಯದ ಲೋಕಸಭಾ ಚುನಾವಣೆ ಅಖಾಡಕ್ಕೆ ಇಳಿದಿರು ಪ್ರಧಾನಿ ನರೇಂದ್ರ ಮೋದಿ, ಮೈಸೂರಿನಿಂದ ತಮ್ಮ ಯಾತ್ರೆ ಆರಂಭಿಸಿದ್ದಾರೆ. ಇದೀಗ ಮಂಗಳೂರಿನಲ್ಲಿ ರೋಡ್​ಶೋ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ನಾರಾಯಣಗುರು ವೃತ್ತದಿಂದ ನವಭಾರತ ವೃತ್ತದವರೆಗೆ ಅಂದರೆ ಸುಮಾರು 2 ಕಿ.ಮೀ. ರೋಡ್​ಶೋ ನಡೆಸಲಿದ್ದಾರೆ.

ಮಂಗಳೂರು, ಏಪ್ರಿಲ್​ 14: ರಾಜ್ಯದ ಲೋಕಸಭಾ ಚುನಾವಣೆ ಅಖಾಡಕ್ಕೆ ಇಳಿದಿರುವ ಪ್ರಧಾನಿ ನರೇಂದ್ರ ಮೋದಿ (Narendra Modi), ಮೈಸೂರಿನಿಂದ ತಮ್ಮ ಯಾತ್ರೆ ಆರಂಭಿಸಿದ್ದಾರೆ. ಇದೀಗ ಮಂಗಳೂರಿನಲ್ಲಿ ರೋಡ್​ಶೋ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ನಾರಾಯಣಗುರು ವೃತ್ತದಿಂದ ನವಭಾರತ ವೃತ್ತದವರೆಗೆ ಅಂದರೆ ಸುಮಾರು 2 ಕಿ.ಮೀ. ರೋಡ್​ಶೋ ನಡೆಸಲಿದ್ದಾರೆ. ಎಡಿಜಿಪಿ ಚಂದ್ರಶೇಖರ್, ಐಜಿಪಿ ಬೋರಲಿಂಗಯ್ಯ ನೇತೃತ್ವದಲ್ಲಿ ಅಂತಿಮ ಹಂತದ ಭದ್ರತೆ ಪರಿಶೀಲಿಸಲಾಗಿದೆ. ಉತ್ಸಾಹದಿಂದ ಮೋದಿಗಾಗಿ ಲಾಲ್​ಬಾಗ್ ಜಂಕ್ಷನ್​ನಲ್ಲಿ ನೂರಾರು ಅಭಿಮಾನಿಗಳು ಜಮಾಯಿಸಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಮತ್ತು ಉಡುಪಿ-ಚಿಕ್ಕಮಗಳೂರು ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿದ್ದಾರೆ. ಪ್ರಧಾನಿ ಮೋದಿ ರೋಡ್​ಶೋವನ್ನು ಲೈವ್​ನಲ್ಲಿ ನೋಡಿ.

Published on: Apr 14, 2024 07:36 PM
Loading...
Unable to load recommendations.
Follow Us
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More