ಎಸ್​.ಎಂ ಕೃಷ್ಣರನ್ನ ಭೇಟಿಯಾದ ಮಂಡ್ಯ ಲೋಕಸಭಾ ಕ್ಷೇತ್ರ ಕೈ ಅಭ್ಯರ್ಥಿ ಸ್ಟಾರ್ ಮಂಜು

|

Updated on: Apr 02, 2024 | 2:19 PM

ಮಾಜಿ ಮುಖ್ಯಮಂತ್ರಿಗಳು ಮತ್ತು ಹಿರಿಯ ಮುತ್ಸದ್ದಿ ಎಸ್.ಎಂ.ಕೃಷ್ಣ ಅವರನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್​ ಚಂದ್ರು) ಭೇಟಿ ಮಾಡಿ ಆಶಿರ್ವಾದ ಪಡೆದರು. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಶಾಸಕ ಗಾಣಿಗ ರವಿ, ವಿಧಾನಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಸಾಥ್​ ನೀಡಿದರು.

ಬೆಂಗಳೂರು, ಏಪ್ರಿಲ್​ 02: ಮಾಜಿ ಮುಖ್ಯಮಂತ್ರಿಗಳು ಮತ್ತು ಹಿರಿಯ ಮುತ್ಸದ್ದಿ ಎಸ್.ಎಂ.ಕೃಷ್ಣ (SM Krishna) ಅವರನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್​ ಚಂದ್ರು) ಅವರು ಭೇಟಿ ಮಾಡಿ ಆಶಿರ್ವಾದ ಪಡೆದರು. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ (Cheluvarayaswamy), ಶಾಸಕ ಗಾಣಿಗ ರವಿ, ವಿಧಾನಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಹೊನ್ನಲಗೆರೆ ರಾಮಕೃಷ್ಣ, ಮಾಜಿ ವಿಧಾನಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಚಿದಂಬರಂ ಸದಾಶಿವ ನಗರದ ಎಸ್.ಎಂ.ಕೃಷ್ಣ ಅವರ ನಿವಾಸದಲ್ಲಿ ಭೇಟಿ ಮಾಡಿ ಸದ್ಯದ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ಮಾಡಿದರು. ಮಂಡ್ಯ ಕಾಂಗ್ರೆಸ್​ ನಾಯಕರ ಈ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ.

ಎಸ್​.ಎಂ ಕೃಷ್ಣರನ್ನು ಭೇಟಿ ಮಾಡಿದ್ದ ಡಿಕೆ ಸುರೇಶ್

ಕೆಲ ದಿನಗಳ ಹಿಂದೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿಕೆ ಸುರೇಶ್ ಅವರು ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದರು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿರುವ ನಿವಾಸಕ್ಕೆ ಭೇಟಿ ನೀಡಿ ಕೃಷ್ಣ ಅವರೊಂದಿಗೆ ಮಾತುಕತೆ ನಡೆಸಿದ್ದರು. ಎಸ್​ಎಂ ಕೃಷ್ಣ ಅವರು ಬೆಂಗಳೂರು ಗ್ರಾಮಾಂತರ ಮತ್ತು ಹಳೇ-ಮೈಸೂರು, ಮಂಡ್ಯ ಭಾಗದಲ್ಲಿ ತಮ್ಮದೆಯಾದ ಪ್ರಭಾವವನ್ನು ಹೊಂದಿದ್ದಾರೆ. ​

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Apr 02, 2024 01:24 PM