ಪೋಕ್ಸೋ ಪ್ರಕರಣದ ಆರೋಪಿಗೆ ಚಪ್ಪಲಿ ಹಾರ ಹಾಕಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ ಸಂತ್ರಸ್ತೆ ಕುಟುಂಬಸ್ಥರು

Edited By: ವಿವೇಕ ಬಿರಾದಾರ

Updated on: Apr 03, 2024 | 10:24 AM

ಬೆಳಗಾವಿ ಜಿಲ್ಲೆಯ ದೊಡ್ಡವಾಡ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ಪೋಕ್ಸೋ ಪ್ರಕರಣದ ಆರೋಪಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದಾರೆ. ಪೋಕ್ಸೋ ಪ್ರಕರಣದಲ್ಲಿ ಮೂರು ತಿಂಗಳ ಹಿಂದೆ ಜೈಲಿಗೆ ಹೋಗಿದ್ದ ಆರೋಪಿ ಇದೀಗ ಜಾಮೀನಿನ ಮೇಲೆ ಹೊರಗೆ ಬಂದಿದ್ದಾನೆ. ಗ್ರಾಮಕ್ಕೆ ಬಂದ ಆರೋಪಿ​ಗೆ ಸಂತ್ರಸ್ತೆ ಚಪ್ಪಲಿಯಿಂದ ಹೊಡೆದಿದ್ದಾಳೆ.

ಬೆಳಗಾವಿ, ಏಪ್ರಿಲ್​ 03: ಪೋಕ್ಸೋ (POSCO) ಪ್ರಕರಣದ ಆರೋಪಿಗೆ ಚಪ್ಪಲಿ ಹಾರ ಹಾಕಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ ಘಟನೆ ಬೆಳಗಾವಿ (Belagavi) ಜಿಲ್ಲೆಯ ದೊಡ್ಡವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅನಿಲ್ ಮೂಕನವರ್ ಪೋಕ್ಸೋ ಪ್ರಕರಣ ಆರೋಪಿ. ಅನಿಲ್ ಮೂಕನವರ್ ಪೋಕ್ಸೋ ಪ್ರಕರಣದಲ್ಲಿ ಮೂರು ತಿಂಗಳ ಹಿಂದೆ ಜೈಲಿಗೆ ಹೋಗಿದ್ದನು. ಇದೀಗ ಮೂರು ತಿಂಗಳ ಬಳಿಕ ಜಾಮೀನಿನ ಮೇಲೆ ಹೊರಗೆ ಬಂದಿದ್ದಾನೆ. ಗ್ರಾಮಕ್ಕೆ ಬಂದ ಆರೋಪಿ ಅನಿಲ್ ಮೂಕನವರ್​ಗೆ ಸಂತ್ರಸ್ತೆ ಚಪ್ಪಲಿಯಿಂದ ಹೊಡೆದಿದ್ದಾಳೆ. ಬಳಿಕ ಸಂತ್ರಸ್ತೆ ಕುಟುಂಬಸ್ಥರು ಆರೋಪಿ ಅನಿಲ್ ಮೂಕನವರ್ ಕೈಯನ್ನು ಕೈಟ್ಟಿ ಚಪ್ಪಲಿ ಹಾರ ಹಾಕಿ ಊರಲ್ಲಿ ಮೆರವಣಿಗೆ ಮಾಡಿದ್ದಾರೆ. ಆರೋಪಿ ಅನಿಲ್ ಮೂಕನವರ್​ನನ್ನು ಗ್ರಾಮದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಿರುವ ವಿಡಿಯೋ ವೈರಲ್ ಆಗಿದೆ.

Published on: Apr 03, 2024 10:22 AM
Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More